ದೆಹಲಿ: ಇಲ್ಲಿನ ಆದರ್ಶನಗರ ಮೆಟ್ರೋ ನಿಲ್ದಾಣದಲ್ಲಿ ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಳಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. 


COMMERCIAL BREAK
SCROLL TO CONTINUE READING

ಆಜಾದ್ಪುರ ಮೆಟ್ರೋ ಪೊಲೀಸ್ ಠಾಣೆ ಪೊಲೀಸರು ಮಾಹಿತಿ ನೀಡಿದ್ದು, ಬುಧವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆದರ್ಶ್ ನಗರ ಮೆಟ್ರೋ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.


ಆದರ್ಶ್ ನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ 1 ರಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಬಳಿ ಯಾವುದೇ ಗುರುತಿನ ದಾಖಲೆಗಳಾಗಲೀ, ಡೆತ್ ನೋಟ್ ಆಗಲೀ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತನ ಗುರುತು ಪತ್ತೆಗೆ ವಿಚಾರಣೆ ಆರಂಭಿಸಿದ್ದಾರೆ.