ಥಾಣೆ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ವ್ಯಕ್ತಿಗೆ ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.


COMMERCIAL BREAK
SCROLL TO CONTINUE READING

10ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆಕೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿದ್ದಲ್ಲದೆ, ಆಕೆ ಬಸ್ ನಲ್ಲಿ ತೆರಳುವಾಗ ಆಕೆಯ ಪಕ್ಕದಲ್ಲಿ ಕುಳಿತು ಮೈಮುಟ್ಟಲು ಪ್ರಯತ್ನಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ತಾಯಿಗೆ ವಿಚಾರ ತಿಳಿಸಿದ ಬಳಿಕ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 


ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ವಿ.ವೈ.ಜಾಧವ್ ಅವರು, ಭಾರತೀಯ ದಂಡ ಸಂಹಿತೆ 354(ಡಿ) ಮತ್ತು ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ ಒಂದು ತಿಂಗಳ ಜೈಲು ಶಿಕ್ಷೆ ಮತ್ತು 20 ಸಾವಿರ ರೂ.ಗಳ ದಂಡ ವಿಧಿಸಿ ಮಂಗಳವಾರ ಆದೇಶ ನೀಡಿದ್ದಾರೆ.