Video Viral : ಕಾರ್ ಸ್ಟಂಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ!

ಭಾನುವಾರ ಮುಂಜಾನೆ ಉದ್ಯೋಗ್ ವಿಹಾರ್ ಹಂತ-4 ರಲ್ಲಿ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Written by - Chetana Devarmani | Last Updated : Nov 22, 2022, 08:25 PM IST
  • ಕುಡಿದ ಮತ್ತಿನಲ್ಲಿ ಕಾರ್ ಸ್ಟಂಟ್
  • ಸ್ಥಳದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ
  • ಇಬ್ಬರಿಗೆ ಗಂಭೀರ ಗಾಯ
Video Viral : ಕಾರ್ ಸ್ಟಂಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ!  title=
ಕಾರ್ ಸ್ಟಂಟ್

ಗುರುಗ್ರಾಮ್‌ (ಹರಿಯಾಣ) : ಕುಡಿದ ಯುವಕರ ಗುಂಪೊಂದು ಗುರುಗ್ರಾಮ್‌ನಲ್ಲಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಮುಂಜಾನೆ ಉದ್ಯೋಗ್ ವಿಹಾರ್ ಹಂತ-4 ರಲ್ಲಿ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ : PF ಖಾತೆದಾರರಿಗೆ ಸಿಹಿ ಸುದ್ದಿ : ನಿಮ್ಮ ತಕ್ಷಣ ಅಕೌಂಟ್ ಮಾಡಿ!

ಕ್ಲಿಪ್‌ನಲ್ಲಿ, ಮದ್ಯದ ಅಂಗಡಿಯ ಹೊರಗೆ ಮಾರುತಿ ಎರ್ಟಿಗಾ, ಹುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾವನ್ನು ಬಳಸಿಕೊಂಡು ಪುರುಷರು (ಸುಮಾರು 10-12) ಸಾಹಸಗಳನ್ನು ಪ್ರದರ್ಶಿಸುವುದನ್ನು ಕಾಣಬಹುದು. ಏಕಾಏಕಿ ಎಸ್‌ಯುವಿಯೊಂದು ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದವರಿಗೆ ಡಿಕ್ಕಿ ಹೊಡೆದಿದೆ. ಚಿಂದಿ ಆಯುವ ವ್ಯಕ್ತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ.

 

 

ಈವರೆಗೆ 7 ಮಂದಿಯನ್ನು ಬಂಧಿಸಿ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಆರೋಪಿಗಳಲ್ಲಿ ಒಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದು, ಮೂವರು ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. ಉದ್ಯೋಗ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ.

ಇದನ್ನೂ ಓದಿ : ಗ್ಲಾಸ್‌ ಸ್ವಲ್ಪ ಸರಿದರೂ..! ಡ್ರೆಸ್ಸೇ ಇಲ್ಲದೆ ಇದೆಂಥಾ ಫ್ಯಾಷನ್?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News