ಪತ್ನಿ ಮತ್ತು ಪುತ್ರನ ಸಮೇತ ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ..! ಆರ್ಥಿಕ ಸಂಕಷ್ಟವೇ ಕಾರಣವಂತೆ

Nagpur Man Set Fire to Car: ಮೃತನ ಮನೆಯಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿದೆ.  ಆರ್ಥಿಕ ಮುಗ್ಗಟ್ಟಿನಿಂದಾಗಿ ತನ್ನ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ ಡೆತ್ ನೋಟಿನಲ್ಲಿ ಬರೆದಿರುವುದಾಗಿ  ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. 

Written by - Ranjitha R K | Last Updated : Jul 20, 2022, 10:25 AM IST
  • ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿ ಆತ್ಮಹತ್ಯೆ
  • ನಾಗ್ಪುರದ ಬೆಲ್ತರೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
  • ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ
ಪತ್ನಿ ಮತ್ತು ಪುತ್ರನ ಸಮೇತ ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ..! ಆರ್ಥಿಕ ಸಂಕಷ್ಟವೇ ಕಾರಣವಂತೆ  title=
Nagpur Man Set Fire to Car (file photo)

Nagpur Man Set Fire to Car : ಮಗ ಮತ್ತು ಪುತ್ರನ ಸಮೇತ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆರ್ಥಿಕ ಸಂಕಷ್ಟವೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿರುವ ಪತ್ನಿ ಮತ್ತು ಪುತ್ರನ ಚಿಕಿತ್ಸೆ ನಡೆಯುತ್ತಿದೆ. 

ನಾಗ್ಪುರದ ಬೆಲ್ತರೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ : 
ಮಾಹಿತಿಯ ಪ್ರಕಾರ, ಈ ಘಟನೆಯು ನಾಗ್ಪುರದ ಬೆಲ್ತರೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಪ್ರಿ ರೆಹಬ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಜೈತಾಲಾ ನಿವಾಸಿ 58 ವರ್ಷದ ರಾಮರಾಜ್ ಗೋಪಾಲಕೃಷ್ಣ ಭಟ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಸಂಗೀತಾ ಭಟ್ ಮತ್ತು ಪುತ್ರ ನಂದನ್ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : Shocking News: ಟ್ರಕ್ ಹರಿಸಿ ಡಿಎಸ್‌ಪಿ ಹತ್ಯೆ..!

ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರಾಮರಾಜ್ ಗೋಪಾಲಕೃಷ್ಣ ಭಟ್  :
ಮೃತನ ಮನೆಯಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿದೆ.  ಆರ್ಥಿಕ ಮುಗ್ಗಟ್ಟಿನಿಂದಾಗಿ ತನ್ನ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ ಡೆತ್ ನೋಟಿನಲ್ಲಿ ಬರೆದಿರುವುದಾಗಿ  ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಭಟ್ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದು, ಇಡೀ ಕಾರಣಕ್ಕೆ ಆತ್ಮಹತ್ಯೆ ನಿರ್ಧಾರ ಮಾಡಿದ್ದರು ಎನ್ನಲಾಗಿದೆ. 

ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ :
ರಾಮರಾಜ್ ಕುಟುಂಬವನ್ನು ಊಟಕ್ಕೆಂದು ಕರೆದುಕೊಂಡು ಹೋಗಿದ್ದರು.  ಆದರೆ ಅರ್ಧ ದಾರಿ ತಲುಪುತ್ತಿದ್ದಂತೆಯೇ ಪತ್ನಿ ಮತ್ತು ಪುತ್ರನ ಮೇಲೆ ಪೆಟ್ರೋಲ್ ಸುರಿದಿದ್ದಾರೆ ಎನ್ನಲಾಗಿದೆ. ನಂತರ ಕಾರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಲ್ತರೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಇದನ್ನೂ ಓದಿ : ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಡಿಎಲ್ ಅಮಾನತುಗೊಳಿಸಬಹುದೇ? ಹೈಕೋರ್ಟ್ ಹೇಳಿದ್ದೇನು?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News