ನವದೆಹಲಿ: ಹಿಂಸಾಚಾರದಿಂದ ಮಣಿಪುರದಲ್ಲಿ ಹದಗೆಟ್ಟ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ನಡುವೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಮೂಲಗಳ ಪ್ರಕಾರ ಬಿರೇನ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಹೇಳಲಾಗುತ್ತಿದೆ. ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಸಂಘರ್ಷದಿಂದಾಗಿ ಅಶಾಂತಿ ನೆಲೆಸಿದೆ. ಮೇಟಿ ಸಮುದಾಯವನ್ನು ಬುಡಕಟ್ಟು ಜನಾಂಗಕ್ಕೆ ಸೇರಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಕುಕಿ ಮತ್ತು ನಾಗಾ ಸಮುದಾಯದ ಜನರು ವಿರೋಧಿಸುತ್ತಿದ್ದಾರೆ. ಮೇ 3ರಿಂದ ಮಣಿಪುರದಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಇಲ್ಲಿಯವರೆಗೆ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮಣಿಪುರದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತವಿದೆ. ಆದರೆ ಇದೀಗ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ.
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ!
ಹಿಂಸಾಚಾರದ ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವ ಮಣಿಪುರಕ್ಕೆ 2 ದಿನಗಳ ಭೇಟಿಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂಫಾಲಕ್ಕೆ ಆಗಮಿಸಿದರು. ಹಿಂಸಾಚಾರಕ್ಕೆ ಬಲಿಯಾದವರ ನೋವು ಹಂಚಿಕೊಳ್ಳಲು ಮತ್ತು ವಾಸ್ತವತೆಯನ್ನು ಅರಿಯಲು ಬಂದಿದ್ದೇನೆ ಎಂದು ರಾಹುಲ್ ಈ ವೇಳೆ ಹೇಳಿಕೊಂಡಿದ್ದಾರೆ. ಅವರ ಈ ಭೇಟಿಯ ಉದ್ದೇಶವು ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರ ಭೇಟಿಯ ಸಮಯದಲ್ಲಿಯೂ ಸಹ ಹಿಂಸಾಚಾರದ ಚಿತ್ರಣಗಳು ಹೊರಹೊಮ್ಮುತ್ತಲೇ ಇದ್ದವು.
ಇದನ್ನೂ ಓದಿ: ನಿಮ್ಮ ಆಧಾರ್ - ಪ್ಯಾನ್ ಲಿಂಕ್ ಆಗಿದ್ಯಾ..? ಈ ವಿಧಾನ ಬಳಸಿ ಇಂದೇ ಖಚಿತ ಪಡಿಸಿಕೊಳ್ಳಿ
ಪರಿಹಾರ ಶಿಬಿರಕ್ಕೆ ರಾಹುಲ್ ಗಾಂಧಿ
2 ದಿನಗಳ ಮಣಿಪುರ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು ಮೇಟಿ ಸಮುದಾಯದ ಜನರನ್ನು ಭೇಟಿಯಾಗಲಿದ್ದಾರೆ. ಗುರುವಾರ ಅವರು ಇಂಫಾಲ ಮತ್ತು ಚುರಚಂದಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ ಹಿಂಸಾಚಾರದಿಂದ ಸಂತ್ರಸ್ತರಾದ ಜನರನ್ನು ಭೇಟಿ ಮಾಡಿದರು. ಆದರೆ ರಾಹುಲ್ ಭೇಟಿ ವೇಳೆಯೂ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆಯಲ್ಲಿ ಹೋಗದಂತೆ ತಡೆದಾಗ ರಾಜಕೀಯ ವಾಗ್ದಾಳಿಯೂ ತೀವ್ರಗೊಂಡಿತು.
ಇಂಫಾಲದ ಪರಿಸ್ಥಿತಿ ಹೇಗಿದೆ?
ಗುರುವಾರ ರಾತ್ರಿ ಇಂಫಾಲ್‌ನಲ್ಲಿ ಜನಸಂದಣಿ ನಿಯಂತ್ರಿಸಲಾಗಲಿಲ್ಲ, ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆಯಿತು. ಈ ಸಂದರ್ಭದಲ್ಲಿ ಪರಿಸ್ಥಿತಿ ಎಷ್ಟು ಹದಗೆಟ್ಟಿತು ಎಂದರೆ ಗುಂಪು ನಿಯಂತ್ರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಹಾರಿಸಬೇಕಾಯಿತು. ರಾಹುಲ್ ರಾಜ್ಯ ಪ್ರವಾಸದಲ್ಲಿದ್ದಾಗ ಇಂಫಾಲದಲ್ಲಿ ಹಿಂಸಾಚಾರ ನಡೆದಿತ್ತು. ಅವರು ಸಂಜೆ ತಡವಾಗಿ ಇಂಫಾಲ್‌ನಲ್ಲಿರುವ ಪರಿಹಾರ ಶಿಬಿರವನ್ನು ತಲುಪಿದರು. ಈ ವೇಳೆ ಹಿಂಸಾಚಾರದಿಂದ ಸಂತ್ರಸ್ತರಾದ ಜನರನ್ನು ಭೇಟಿ ಮಾಡಿದರು.
ಇದನ್ನೂ ಓದಿ: ಈ ದೇಶದಲ್ಲಿ ಫೋಟೋ ತೆಗೆಯುವುದು ಮಹಾ ಅಪರಾಧ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.