Be Vocal For Local In Festival Shopping: ಇಂದಿನ ತಮ್ಮ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ಪಿಎಂ ನರೇಂದ್ರ ಮೋದಿ (PM Narendra Modi) ಅವರು ಲಸಿಕೆ ಅಭಿಯಾನಕ್ಕೆ (Vaccination Drive) ಹೆಚ್ಚಿನ ಕೊಡುಗೆ ನೀಡಿದ ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದು ದೇಶದಲ್ಲಿ ಲಸಿಕೆ 1 ಬಿಲಿಯನ್ ದಾಟಿದೆ ಎಂದು ಅವರು ಹೇಳಿದ್ದಾರೆ. ದೇಶದ ಆರೋಗ್ಯ ಕಾರ್ಯಕರ್ತರು ಈ ಗುರಿಯನ್ನು ಸಾಧಿಸುವಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಮತ್ತು ಇದಕ್ಕಾಗಿ ಯಾವುದೇ ಕೊರತೆಯನ್ನು ಅವರು ಉಂಟುಮಾಡಿಲ್ಲ. ಮನ್ ಕಿ ಬಾತ್ ನ 82 ನೇ ಆವೃತ್ತಿಯಲ್ಲಿ ಭಾರತದ ಮಹಿಳಾ ಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ವಿಶ್ವಸಂಸ್ಥೆಯ ಶಕ್ತಿ ಮತ್ತು ಪ್ರಭಾವವನ್ನು ಹೆಚ್ಚಿಸಲು ಭಾರತೀಯ ಮಹಿಳೆಯರು ಶ್ರಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಮಹಿಳಾ ರಾಜತಾಂತ್ರಿಕರು ವಿಶ್ವಸಂಸ್ಥೆಯಲ್ಲಿ ಚೀನಾ ಮತ್ತು ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.


COMMERCIAL BREAK
SCROLL TO CONTINUE READING

ಈ ಸಂದರ್ಭದಲ್ಲಿ, ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿನದಂದು (National Unity Day) ಮೂರು ಸ್ಪರ್ಧೆಗಳನ್ನು ಆಯೋಜಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ (Birsa Munda) ಅವರನ್ನು ಸ್ಮರಿಸಿದ್ದಾರೆ. ನಾವೆಲ್ಲರೂ ಇಂತಹ ಕೆಲವು ಚಟುವಟಿಕೆಯೊಂದಿಗೆ ಸಂಬಂಧ ಹೊಂದಬೇಕು, ಇದು ದೇಶದ ಏಕತೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಮಟ್ಟದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸುವುದಾಗಿ ಅವರು ಘೋಷಿಸಿದ್ದಾರೆ. ಇಂದು ನಮ್ಮ ದೇಶ ತಂತ್ರಜ್ಞಾನದ ವಿಷಯದಲ್ಲಿಯೂ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಡ್ರೋನ್ ತಂತ್ರಜ್ಞಾನವನ್ನು (Drone Technology) ಉಲ್ಲೇಖಿಸಿ, ಈ ಮೂಲಕ ನಾವು ಅನೇಕ ಕೆಲಸಗಳನ್ನು ಮಾಡಬಹುದು ಎಂದು ಹೇಳಿದ್ದಾರೆ. 


ಇದನ್ನೂ ಓದಿ-Diwali Bonus : ದೀಪಾವಳಿಗೆ ಮುನ್ನ ಈ ಸರ್ಕಾರಿ ನೌಕರರಿಗೆ ಬಿಗ್ ಶಾಕ್! ಈ ಬಾರಿ ಸಿಗಲಿದೆ ಕೇವಲ ಅರ್ಧ ಬೋನಸ್


ಡ್ರೋನ್ ತಂತ್ರಜ್ಞಾನದ ಬಳಕೆಯನ್ನು ಉತ್ತೇಜಿಸಲು, ನಾವು ಅದರ ಪರವಾನಗಿ ಪ್ರಕ್ರಿಯೆಯನ್ನು ಸರಳಗೊಳಿಸಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಪ್ರಸ್ತಾಪಿಸಿದ್ದಾರೆ  ಮತ್ತು ದೀಪಾವಳಿಯಲ್ಲಿ ಸ್ವಚ್ಛತೆಯ ಸಮಯದಲ್ಲಿ ನಮ್ಮ ಮನೆಯ ಸ್ವಚ್ಛತೆಯ ಬಗ್ಗೆ ಮಾತ್ರವಲ್ಲದೆ ನೆರೆಹೊರೆಯವರ ಬಗ್ಗೆಯೂ ಚಿಂತಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ಅಭಿಯಾನದ ಅಡಿಯಲ್ಲಿ ನಾವು ಕೂಡ ಸಿಂಗಲ್ ಯೂಸ್  ಪ್ಲಾಸ್ಟಿಕ್ ಅನ್ನು ಬಳಸುವುದಿಲ್ಲ ಎಂದು ಪಣ ತೊಡಬೇಕು ಎಂದು ಅವರು ಹೇಳಿದ್ದಾರೆ. 


ಇದನ್ನೂ ಓದಿ-Good News: ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಗಿಫ್ಟ್! ಈ ನೌಕರರಿಗೆ ಸಿಗಲಿದೆ 30 ದಿನಗಳ Diwali Bonus


ಹಬ್ಬ (Diwali 2021) ಹರಿದಿನಗಳನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾವು ಹಬ್ಬ ಹರಿದಿನಗಳಲ್ಲಿ ಶಾಪಿಂಗ್ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ನಾವು ವೋಕಲ್ ಫಾರ್ ಲೋಕಲ್ (Vocal For Local) ಕುರಿತು ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.  ಹಬ್ಬಗಳಲ್ಲಿ, ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸಬೇಕು ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ನಾವು ಯಾವುದೇ ಬಡವರಿಂದ ಒಳ್ಳೆಯ ವಸ್ತುಗಳನ್ನು ಖರೀದಿಸಿದರೆ, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಹಂಚಿಕೊಳ್ಳಿ ಎಂದು ಅವರು ಹೇಳಿದ್ದಾರೆ. ಇದು ಸ್ವದೇಶಿ ವಸ್ತುಗಳನ್ನು ಖರೀದಿಸಲು ಜನರಿಗೆ ಪ್ರೇರಣೆ ನೀಡಲಿದೆ ಎಂದು ಅವರು ಹೇಳಿದ್ದಾರೆ. 


ಇದನ್ನೂ ಓದಿ-Union Health Ministry : ಹಬ್ಬದ ಸೀಸನ್ ಆರಂಭವಾಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವಾಲಯದಿಂದ 'ಕೊರೋನಾ' ಎಚ್ಚರಿಕೆ 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.