Martyr's Day 2023: ದೇಶದಲ್ಲಿ ಹುತಾತ್ಮರಾದವರನ್ನು ಗೌರವಿಸಲು ಮತ್ತು ಅವರ ತ್ಯಾಗವನ್ನು ಸ್ಮರಿಸಲು ಇಂದು (ಮಾರ್ಚ್ 23) ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್ ಸಿಂಗ್, ಅವರ ಒಡನಾಡಿ ರಾಜಗುರು, ಸುಖದೇವ್ ಅವರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.


COMMERCIAL BREAK
SCROLL TO CONTINUE READING

ವಾಸ್ತವವಾಗಿ, ಈ ದಿನದಂದು ಭಾರತ ಮಾತೆಯ ಸುಪುತ್ರರಾದ ಭಗತ್ ಸಿಂಗ್, ಸುಖದೇವ್, ರಾಜಗುರು ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂವರ ತ್ಯಾಗವನ್ನು ಸ್ಮರಿಸಿ ಟ್ವೀಟ್ ಮಾಡಿದ್ದಾರೆ, ಭಾರತವು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ತ್ಯಾಗವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ. ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ವಿನೂತನ ಕೊಡುಗೆ ನೀಡಿದ ಮಹಾನ್ ವ್ಯಕ್ತಿಗಳು ಅವರು ಎಂದು ಪ್ರಧಾನಿ ಹೇಳಿದ್ದಾರೆ. 


World Sleep Day 2023: ಒಳ್ಳೆಯ ನಿದ್ದೆ ಆರೋಗ್ಯಕ್ಕೆ ಎಷ್ಟು ಮುಖ್ಯ? ವಿಶ್ವ ನಿದ್ರಾ ದಿನ ಏಕೆ ಆಚರಿಸಲಾಗುತ್ತದೆ?


ಅಮಿತ್ ಷಾ ಹೇಳಿದ್ದೇನು?
ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಷಾ, ಶಹೀದ್ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರು ತಮ್ಮ ಆಲೋಚನೆಗಳು ಮತ್ತು ಜೀವನದಿಂದ ಸ್ವಾತಂತ್ರ್ಯ ಚಳುವಳಿಯನ್ನು ತಮ್ಮದೇ ಆದ ವಿಧಾನದಲ್ಲಿ ಮುಂದಕ್ಕೆ ತೆಗೆದುಕೊಂಡು ಹೋಗಿದ್ದರು.  ಇದು ಇತಿಹಾಸದಲ್ಲಿ ಅಪರೂಪವಾಗಿ ಕಂಡುಬರುತ್ತದೆ. ಅವರ ಶೌರ್ಯ ಮತ್ತು ದೇಶಭಕ್ತಿ ಯುಗಯುಗಾಂತರಗಳಿಗೂ ಸ್ಪೂರ್ತಿದಾಯಕವಾಗಿರುತ್ತದೆ. ಇಂದು ಹುತಾತ್ಮರ ದಿನದಂದು ನಾನು ಕೋಟ್ಯಂತರ ದೇಶವಾಸಿಗಳೊಂದಿಗೆ ಅವರಿಗೆ ನಮಸ್ಕರಿಸುತ್ತೇನೆ ಎಂದಿದ್ದಾರೆ.


ಇದನ್ನೂ ಓದಿ-World Water Day : ನಾವು ನದಿ, ಬಾವಿ, ಬಾಟಲಲ್ಲಿ ನೀರು ನೋಡಿದ್ದಾಯಿತು..! ಮುಂದಿನ ಮಕ್ಕಳ ಗತಿ ಏನು..?


ಸಿಎಂ ಕೇಜ್ರಿವಾಲ್ ಟ್ವೀಟ್ 
ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಸರ್ದಾರ್ ಭಗತ್ ಸಿಂಗ್, ಸುಖದೇವ್, ರಾಜ್ ಗುರು ಗಳಂತಹ ಅಮರ ಹುತಾತ್ಮರಿಗೆ ಹುತಾತ್ಮ ದಿನದಂದು ಲಕ್ಷಾಂತರ ನಮನಗಳು ಎಂದಿದಾರೆ.


ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.