Massive Fire Accident: ಹಿಮಾಚಲ ಪ್ರದೇಶದಲ್ಲಿ 27 ಮನೆ, 26 ಗೋಶಾಲೆಗಳು ಸುಟ್ಟು ಭಸ್ಮ..!
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ (Himachal pradesh fire Accident) ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಜ್ಹಾನ್ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಮನೆಗಳು ಮತ್ತು ಎರಡು ದೇವಾಲಯಗಳು ಬೆಂಕಿಗೆ ಆಹುತಿಯಾಗಿವೆ. 26 ಗೋಶಾಲೆಗಳು ಸುಟ್ಟು ಹೋಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಕುಲು: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ (Himachal pradesh fire Accident) ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಜ್ಹಾನ್ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಮನೆಗಳು ಮತ್ತು ಎರಡು ದೇವಾಲಯಗಳು ಬೆಂಕಿಗೆ ಆಹುತಿಯಾಗಿವೆ. 26 ಗೋಶಾಲೆಗಳು ಸುಟ್ಟು ಹೋಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಸಿಎಂ ಜೈರಾಮ್ ಠಾಕೂರ್ ಆಘಾತ ವ್ಯಕ್ತಪಡಿಸಿದ್ದಾರೆ. ಬೆಂಬಲ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂಡು ತಿಳಿಸಿದ್ದಾರೆ. ಸಂತ್ರಸ್ತರಿಗೆ ಎಲ್ಲ ರೀತಿಯಿಂದಲೂ ರಕ್ಷಣೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಮನೆಗಳಿಗೆ ಏಕಾಏಕಿ ಬೆಂಕಿ ಬಿದ್ದ ಕಾರಣ ಜನರು ಭಯಭೀತರಾಗಿ ಓಡಲಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಗ್ರಾಮವು ಹಿಮಾಚಲದ ಕುಲು ಪ್ರದೇಶದ ಗಡಪರ್ಲಿ ಪಂಚಾಯತ್‌ಗೆ ಸೇರಿದೆ. ಕಟ್ಟಿಗೆಯ ಸಾಂಪ್ರದಾಯಿಕ 'ಕತ್-ಕುಣಿ' ಮನೆಗಳು ಬೆಂಕಿ ಅವಘವದಲ್ಲಿ ನಾಶವಾಗಿವೆ.
ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ಮನೆಯೊಂದರಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆಯಿಂದ ಮಾಡಿದ ಮನೆಗಳಿರುವ ಕಾರಣ ಬೆಂಕಿ ಇತರ ಮನೆಗಳಿಗೆ ವೇಗವಾಗಿ ಹರಡಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲದ ಕಾರಣ ಅಗ್ನಿಶಾಮಕ ಸಿಬ್ಬಂದಿ ಎರಡು ಗಂಟೆಗಳ ಕಾಲ ನಡೆದುಕೊಂಡು ಹೋಗಬೇಕಾಗಿತ್ತು.
ಬೆಂಕಿಗೆ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ. ಕುಲು ಡೆಪ್ಯೂಟಿ ಕಮಿಷನರ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಏನಿದು ಕಾಶಿ-ವಿಶ್ವನಾಥ ಕಾರಿಡಾರ್? ಪ್ರಧಾನಿ ಮೋದಿ ಕನಸಿನ ಯೋಜನೆ ಬಗ್ಗೆ ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.