ದೆಹಲಿಯ ಪಂಜಾಬಿ ಬಾಗ್‌ನ ಗೋದಾಮಿನಲ್ಲಿ ಭಾರಿ ಅಗ್ನಿ ಅನಾಹುತ

ಸ್ಥಳಕ್ಕೆ 22 ಅಗ್ನಿಶಾಮಕ ದಳಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಇದುವರೆಗೂ ವರದಿಯಾಗಿಲ್ಲ.

Updated: Sep 7, 2019 , 06:43 PM IST
ದೆಹಲಿಯ ಪಂಜಾಬಿ ಬಾಗ್‌ನ ಗೋದಾಮಿನಲ್ಲಿ ಭಾರಿ ಅಗ್ನಿ ಅನಾಹುತ

ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಜಾಬಿ ಬಾಗ್ ಪ್ರದೇಶದ ಗೋಡೌನ್‌ನಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. 

ಸ್ಥಳಕ್ಕೆ 22 ಅಗ್ನಿಶಾಮಕ ದಳಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಇದುವರೆಗೂ ವರದಿಯಾಗಿಲ್ಲ.

ದಟ್ಟವಾದ ಕಪ್ಪು ಹೊಗೆ ಆಕಾಶದೆತ್ತರ ಹಬ್ಬಿದ್ದು, ಜನತೆ ಆತಂಕಗೊಂಡಿದ್ದಾರೆ. 

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.