ದೆಹಲಿಯ ಪಶ್ಚಿಮ್‌ಪುರಿ ಕೊಳೆಗೇರಿಯಲ್ಲಿ ಅಗ್ನಿ ಆಕಸ್ಮಿಕ; 200ಕ್ಕೂ ಹೆಚ್ಚು ಗುಡಿಸಲು ಭಸ್ಮ
ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಅಗ್ನಿ ದುರಂತ.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಗುಡಿಸಲು ಬೆಂಕಿಗೆ ಆಹುತಿಯಾಗಿವೆ.
ದೆಹಲಿಯ ಪಶ್ಚಿಮ್‌ಪುರಿ ಕೊಳೆಗೇರಿಯಲ್ಲಿ ಇನು ಸಸುಕಿನ ವೇಳೆ ಈ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ 20 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಸಮರೋಪಾದಿಯಲ್ಲಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡವು.
"ಬೆಂಕಿ ನಂದಿಸಲು ಸುಮಾರು ಎರಡು ಗಂಟೆ ಕಾರ್ಯಾಚರಣೆ ನಡೆಸಲಾಗಿದೆ. ಇನ್ನೂ ಇಡೀ ಪ್ರದೇಶವನ್ನು ತಣ್ಣಗಾಗಿಸುವ ಪ್ರಯತ್ನ ಮುಂದುವರಿದಿದೆ" ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಈ ಘಟನೆಯಲ್ಲಿ ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.