Mundka Fire Incident : ದೆಹಲಿಯ ಅತ್ಯಂತ ಜನನಿಬಿಡ ಪ್ರದೇಶವಾದ ಮುಂಡ್ಕಾದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿಯಲ್ಲಿ 26 ಜನ ಸಾವನ್ನಪ್ಪಿದ್ದಾರೆ. ಘಟನೆಯ ಸ್ಥಳದಲ್ಲಿ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ.
26 ಜನ ಸಜೀವದಹನ!
ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಇಡೀ ಪ್ರದೇಶದಲ್ಲಿ ಅಸ್ತವ್ಯಸ್ತವಾಗಿತ್ತು. ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಜಗದಲ್ಲಿ ಬಹಳ ದಿನಗಳಿಂದ ಸಿಸಿಟಿವಿ ಗೋದಾಮು ಇತ್ತು ಎಂದು ಹೇಳಲಾಗುತ್ತಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಅಪಘಾತದಲ್ಲಿ ಇದುವರೆಗೆ 26 ಜನ ಸಜೀವದಹನರಾಗಿದ್ದಾರೆ ಎಂದು ತಿಳಿಸಿದೆ.
#WATCH | Fire near Mundka metro station, Delhi: 1 woman dead in the fire. Rescue operation continues with about 15 fire tenders at the spot, as per DCP Sameer Sharma, Outer district pic.twitter.com/okHUjGE7cn
— ANI (@ANI) May 13, 2022
ಇದನ್ನೂ ಓದಿ : Actress suicide: ಗಂಡನಿಂದ ಕಿರುಕುಳ ಆರೋಪ, ಯುವ ನಟಿ ನಿಗೂಢ ಸಾವು..!
3ನೇ ಮಹಡಿಯಲ್ಲಿ ಮುಂದುವರೆದ ಕಾರ್ಯಾಚರಣೆ
ಅಪಘಾತದಲ್ಲಿ ಇಲ್ಲಿಯವರೆಗೆ 10 ಮಂದಿ ಗಾಯಗೊಂಡಿದ್ದಾರೆ. ಸಂಜೆ 4.40ರ ವೇಳೆಗೆ ಅಗ್ನಿ ಅವಘಡದ ಬಗ್ಗೆ ಅಗ್ನಿಶಾಮಕದವರಿಗೆ ಮಾಹಿತಿ ಬಂದಿತ್ತು. ಸಧ್ಯ ಘಟನಾ ಸ್ಥಳದಲ್ಲಿ 30 ಅಗ್ನಿಶಾಮಕ ವಾಹನಗಳು ಆಗಮಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗರ್ಗ್, 'ಇಂದು ಸಂಜೆ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಿಂದ ಒಟ್ಟು 26 ಮೃತದೇಹಗಳು ಪತ್ತೆಯಾಗಿವೆ. ಮೂರನೇ ಮಹಡಿಯ ಶೋಧ ಕಾರ್ಯ ಇನ್ನಷ್ಟೇ ಆಗಬೇಕಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Health Insurance: ವಿಮಾದಾರರಿಗೆ ಖುಷಿ ಸುದ್ದಿ, ವಿಮಾ ಕಂಪನಿಗಳಿಗೆ ಈ ಅನುಮತಿ ನೀಡಿದ IRDA
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.