ನವದೆಹಲಿ: ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ 5 ಸುತ್ತು ಮಾತುಕತೆ ನಡೆದು 5 ಸುತ್ತಿನ ಮಾತುಕತೆಗಳೂ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಾಳೆ (ಡಿಸೆಂಬರ್ 8) ‘ಭಾರತ ಬಂದ್’ಗೆ ಕರೆ ನೀಡಿದ್ದು, ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.


COMMERCIAL BREAK
SCROLL TO CONTINUE READING

ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ‘ಭಾರತ ಬಂದ್’(Bharat Bandh)ಗೆ ರೈತರು ಮಾತ್ರವಲ್ಲದೆ ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳಿಂದಲೂ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ದೇಶದ ಪ್ರಮುಖ ರಾಜಕೀಯ ಪಕ್ಷಗಳ ನೇತಾರರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಎನ್‌ಸಿಪಿ ನಾಯಕ ಶರದ್ ಪವಾರ್, ರಾಷ್ಟ್ರೀಯ ಜನತಾದಳ ಆರ್‌ಜೆಡಿ (RJD) ನಾಯಕ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಗುಪ್ಕರ್ ಗುಂಪಿನ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಎಡಪಕ್ಷಗಳ ಮುಖಂಡರಾದ ಸೀತಾರಾಂ ಯೆಚೂರಿ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ.


ರೈತರು ದೆಹಲಿ ಗಡಿಯಲ್ಲಿ ‌ಕೊರೆಯುವ ಚಳಿಯಲ್ಲಿ 12 ದಿನಗಳಿಂದ ಪ್ರತಿಭಟಿಸುತ್ತಿದ್ದರೂ, ಶೀತಗಾಳಿಗೆ ಈಗಾಗಲೇ ಪ್ರಾಣಹಾನಿ ಸಂಭವಿಸಿದ್ದರೂ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ 'ಮಾತುಕತೆ ನಡೆಸುವ' ನೆಪವನ್ನೇ ಮುಂದುವರೆಸಿದೆ. ಆದುದರಿಂದ ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಎನ್ ಡಿಎ (NDA) ಮೈತ್ರಿಕೂಟದ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಯತ್ನವೂ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಡಿ ಇಟ್ಟಿರುವ ಅಕಾಲಿದಳ ಈಗಾಗಲೇ ಶಿವಸೇನಾ (Shivasena) ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಗಳ ನಾಯಕರನ್ನು ಭೇಟಿಯಾಗಿದೆ. ಇಂದು ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನೂ ಭೇಟಿಯಾಗುವ ಸಾಧ್ಯತೆ ಇದೆ.


ರೈತರ ಪ್ರತಿಭಟನೆಗೆ ಸಾರಿಗೆ ಬೆಂಬಲ, ಡಿಸೆಂಬರ್ 8ರಿಂದ ನಿಲ್ಲಲಿದೆ ಈ ಸೇವೆ


ಭಾನುವಾರ ಅಕಾಲಿದಳ ಸಂಸದ ಪ್ರೇಮ್ ಸಿಂಗ್ ಚಂದ್ರುಮರ್ಜಾ ಅವರು ಶಿವಸೇನೆಯ ನಾಯಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ‌ ಪ್ರತಿಕ್ರಿಯಿಸಿರುವ ಉದ್ಧವ್‌ ಠಾಕ್ರೆ, ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷಗಳಾಗಿರುವ ಕಾಂಗ್ರೆಸ್, ಎನ್‌ಸಿಪಿ (NCP) ಹಾಗೂ ಶಿವಸೇನಾ ಪಕ್ಷಗಳು ರೈತರ ಜೊತೆಗಿವೆ. ರೈತರು ದೇಶದ ಬೆನ್ನೆಲುಬು. ಅವರ ಸಂಕಷ್ಟಗಳನ್ನು ಪರಿಹರಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.ಕಾಂಗ್ರೆಸ್, ಎನ್‌ಸಿಪಿ ಹಾಗೂ ಶಿವಸೇನಾ ಪಕ್ಷಗಳು ರೈತರ ಜೊತೆಗಿವೆ. ರೈತರು ದೇಶದ ಬೆನ್ನೆಲುಬು. ಅವರ ಸಂಕಷ್ಟಗಳನ್ನು ಪರಿಹರಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.


ಇದಕ್ಕೂ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕೂಡ ರೈತರ ಪರವಾಗಿ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ ಎಂದಿದ್ದರು. ಇದೀಗ ರಾಹುಲ್ ಗಾಂಧಿ ಅವರ ಮಾತಿಗೆ ಉದ್ಧವ್‌ ಠಾಕ್ರೆ ದನಿಗೂಡಿಸಿದ್ದಾರೆ. ಇದಲ್ಲದೆ ರೈತರ ಹೋರಾಟವನ್ನು ಬೆಂಬಲಿಸಿ ನಾಳೆ (ಡಿಸೆಂಬರ್ 8) ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್, ಅಕಾಲಿ ದಳ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್‌ಎಸ್, ಶಿವಸೇನಾ ಘೋಷಿಸಿವೆ.ಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್‌ಎಸ್, ಶಿವಸೇನಾ ಘೋಷಿಸಿವೆ.


ರಾಜಕೀಯ ಪಕ್ಷಗಳಲ್ಲದೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ, ಆಫೀಸರ್ಸ್ ಯೂನಿಯನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್, ಇಂಡಿಯನ್ ಟೂರಿಸ್ಟ್ ಟ್ರಾನ್ಸ್‌ಪೋರ್ಟ್ ಸಂಘಟನೆ, ದೆಹಲಿ ಗೂಡ್ಸ್ ಟ್ರಾನ್ಸ್‌ಪೋರ್ಟ್ ಸಂಘಟನೆ ಹಾಗೂ ಇನ್ನಿತರ ರೈತ ಪರ ಸಂಘಟನೆಗಳು ಕೂಡ ಭಾರತ್ ಬಂದ್'ಗೆ ಬೆಂಬಲ ಸೂಚಿಸಿವೆ.


ನಾಳೆ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತ:
ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ದೆಹಲಿ-ಎನ್‌ಸಿಆರ್ ಸೇರಿದಂತೆ ದೇಶಾದ್ಯಂತ ಸರಕುಗಳ ಸಾಗಣೆ ಮತ್ತು ಸರಬರಾಜನ್ನು ನಿಲ್ಲಿಸಲಾಗುವುದು ಎಂದು ಅಖಿಲ ಭಾರತ ಮೋಟಾರು ಸಾರಿಗೆ ಕಾಂಗ್ರೆಸ್ (All India Auto Transport Congress) ಹಾಗೂ ಇನ್ನಿತರ ಸಂಘಟನೆಗಳು ಹೇಳಿವೆ. ಇದರಿಂದ ಸರಕುಗಳ ಸಾಗಣೆ ಮತ್ತು ಸರಬರಾಜಿನಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.


'ರೈತರ ಬೇಡಿಕೆ ಈಡೇರದೆ ಹೋದಲ್ಲಿ ಖೇಲ್ ರತ್ನಾ ಪ್ರಶಸ್ತಿ ವಾಪಸ್ ಮಾಡುತ್ತೇನೆ'


ಸುಮಾರು 95 ಲಕ್ಷ ಟ್ರಕ್ ಚಾಲಕರು ಮತ್ತು ಇತರ ಸಂಸ್ಥೆಗಳನ್ನು ಪ್ರತಿನಿಧಿಸುವ ಅಖಿಲ ಭಾರತ ಮೋಟಾರು ಸಾರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿರುವುದು ರೈತರ ಆಂದೋಲನಕ್ಕೆ ಇನ್ನಷ್ಟು ಬಲ ಬಂದಂತಾಗಿದೆ. 'ರೈತರು (Farmers) ನಮ್ಮ ಪೂರೈಕೆದಾರ ಮತ್ತು ಭಾರತದ ಆರ್ಥಿಕತೆಯ ಬೆನ್ನೆಲುಬು. ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಅಖಿಲ ಭಾರತ ಮೋಟಾರು ಸಾರಿಗೆ ಕಾಂಗ್ರೆಸ್ ಹೇಳಿದೆ.


ದೇಶದ ಸುಮಾರು 70 ಪ್ರತಿಶತ ಗ್ರಾಮೀಣ ಪ್ರದೇಶಗಳು ಕೃಷಿಗೆ ಸಂಬಂಧಿಸಿವೆ. ರೈತರು ನಮ್ಮ ದೇಶದ ದಾನಿಗಳು ಮತ್ತು ಅವರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದು ಅವಶ್ಯಕ. ಅವರ ಬೇಡಿಕೆಗಳನ್ನು ಈಡೇರಿಸದಿದ್ದರೆ ಡಿಸೆಂಬರ್ 8 ರಿಂದ ನಮ್ಮ ಎಲ್ಲಾ ಕಾರ್ಯಾಚರಣೆ ಸ್ಥಗಿತವಾಗಲಿವೆ ಎಂದು ಸಾರಿಗೆ ಕಾಂಗ್ರೆಸ್ ಅಧ್ಯಕ್ಷ ಕುಲ್ತರಣ್ ಸಿಂಗ್ ಅಟ್ವಾಲ್ ಹೇಳಿದ್ದಾರೆ.


ಮತ್ತೆ ಡಿ.8 ರಂದು ರಾಜ್ಯ ರೈತರಿಂದ 'ಕರ್ನಾಟಕ ಬಂದ್ ಗೆ ಕರೆ'


ರೈತರ ಪಾಲಿಗೆ ಮರಣಶಾಸನವಾಗಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು.‌ ರೈತ ಬೆಳೆಯುವ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು. ರೈತರಿಗೆ ಪೂರಕವಾಗಿಲ್ಲದ ವಿದ್ಯುತ್ ಕಾಯಿದೆಯನ್ನು ಹಿಂಪಡೆಯಬೇಕು ಎಂಬವು ರೈತರ ಪ್ರಮುಖ ಹಕ್ಕೊತ್ತಾಯಗಳು.


ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಎಪಿಎಂಸಿ ಮಂಡಿಗಳ ಬಗೆಗಿನ ಕಳವಳವನ್ನು ಹೋಗಲಾಡಿಸಲು ಪ್ರಯತ್ನಿಸಲಾಗುವುದು. ಕನಿಷ್ಠ ಬೆಂಬಲ ಬೆಲೆ (MSP) ಪದ್ಧತಿ ಮುಂದುವರೆಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.‌ ಸಚಿವತ್ರಯರ ಪ್ರಸ್ತಾಪವನ್ನು ರೈತರು ಒಪ್ಪಿಕೊಳ್ಳಲಿಲ್ಲ. ರೈತರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪೊಕೊಂಡಿಲ್ಲ.‌ ಇದರಿಂದ ಈವರೆಗೆ ನಡೆದ 4 ಸಭೆಗಳೂ ವಿಫಲವಾಗಿವೆ. ಡಿಸೆಂಬರ್ 9ಕ್ಕೆ ಮತ್ತೊಂದು ಸಭೆ ಕರೆಯಲಾಗಿದೆ.