'ಖರ್ಗೆ ಅವರಿಗೆ ಫಲಪ್ರದ ಅಧಿಕಾರ ಸಿಗಲಿ ': ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಚುನಾವಣಾ ಸ್ಪರ್ಧೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸುವ ಮೂಲಕ  ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.

Written by - Zee Kannada News Desk | Last Updated : Oct 19, 2022, 07:54 PM IST
  • 'ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿರುವ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ನನ್ನ ಶುಭಾಶಯಗಳು.
  • ಪಕ್ಷದಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರು ಎಂಬುದಿಲ್ಲ
  • ಸಂಘಟನೆಯನ್ನು ಬಲಪಡಿಸಲು ನಿಜವಾದ ಕಾಂಗ್ರೆಸ್ ಸೈನಿಕನಾಗಿ ಕೆಲಸ ಮಾಡುತ್ತೇನೆ
 'ಖರ್ಗೆ ಅವರಿಗೆ ಫಲಪ್ರದ ಅಧಿಕಾರ ಸಿಗಲಿ ': ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ title=

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಚುನಾವಣಾ ಸ್ಪರ್ಧೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸುವ ಮೂಲಕ  ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.

'ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿರುವ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ನನ್ನ ಶುಭಾಶಯಗಳು. ಅವರು ಫಲಪ್ರದ ಅಧಿಕಾರವನ್ನು ಹೊಂದಲಿ' ಎಂದು ಅವರು ಟ್ವೀಟ್‌ನಲ್ಲಿ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಬೆಂಕಿಯಲ್ಲಿ ಅರಳಿದ ಹೂ ಖರ್ಗೆ...!

ಮಲ್ಲಿಕಾರ್ಜುನ ಖರ್ಗೆ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆ ಹಾಕುತ್ತಿರುವ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ ಕೆಲವೇ ನಿಮಿಷಗಳಲ್ಲಿ ಮೋದಿಯವರ ಟ್ವೀಟ್ ಬಂದಿದೆ.ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಪಕ್ಷದಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರು ಎಂಬುದಿಲ್ಲ ಮತ್ತು ಸಂಘಟನೆಯನ್ನು ಬಲಪಡಿಸಲು ನಿಜವಾದ ಕಾಂಗ್ರೆಸ್ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

 

ಇದನ್ನೂ ಓದಿ: Big News: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಚಲಾವಣೆಯಾದ 9,385 ಮತಗಳಲ್ಲಿ ಖರ್ಗೆ 7,897 ಮತಗಳನ್ನು ಪಡೆದರೆ, ತರೂರ್ 1,072 ಮತ್ತು 416 ಮತಗಳನ್ನು ಅಸಿಂಧು ಎಂದು ಘೋಷಿಸಲಾಯಿತು ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಇಂದು ಬೆಳಿಗ್ಗೆ ಘೋಷಿಸಿದರು.ಖರ್ಗೆ ಅವರು 24 ವರ್ಷಗಳಲ್ಲಿ ಮೊದಲ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ ಮತ್ತು ಅಕ್ಟೋಬರ್ 26 ರಂದು ಪಕ್ಷದ ಮುಖ್ಯಸ್ಥರಾಗಿ ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News