ಲಕ್ನೋ: ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು, ಯೋಗಿ ಆದಿತ್ಯನಾಥ್ ಸರ್ಕಾರದ ಈ ನಿರ್ಧಾರ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಮಾಯಾವತಿ, "ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಯುಪಿ ಸರ್ಕಾರದ ನಿರ್ಧಾರ ಕ್ರೂರವಾಗಿದೆ. ಇದು ಹಣದುಬ್ಬರಕ್ಕೆ ಕಾರಣವಾಗಲಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಪರಿಣಾಮ ಬೀರಲಿದೆ. ನಿರುದ್ಯೋಗ ಸೇರಿದಂತೆ ಇತರ ಸಮಸ್ಯೆಗಳನ್ನು ಎದುರಿಸುತ್ತಿರುವ ಬಡಜನತೆಗೆ ಇದು ಮತ್ತಷ್ಟು ಹೊರೆಯಾಗಲಿದೆ. ಹಾಗಾಗಿ ಸರ್ಕಾರ ಜನರ ಅಭಿವೃದ್ಧಿ ಬಗ್ಗೆ ಗಮನಹರಿಸಿದರೆ ಉತ್ತಮ" ಎಂದು ವಾಗ್ದಾಳಿ ನಡೆಸಿದ್ದಾರೆ.


ಉತ್ತರಪ್ರದೇಶದಲ್ಲಿ ಡೀಸೆಲ್ ಬೆಲೆಯನ್ನು 2.5 ರೂ.ಗೆ ಮತ್ತು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 1 ರೂ. ಏರಿಸಲಾಗಿದ್ದು, ಸೋಮವಾರ ಮಧ್ಯರಾತ್ರಿಯಿಂದ ಈ ಬೆಲೆಗಳು ಜಾರಿಯಾಗಿವೆ.