ಯಾದವರು ನಮಗೆ ಮತ ನೀಡಿಲ್ಲ ಎಂದು ದೂರಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ
ಇದಕ್ಕೂ ಮೊದಲು ಭಾನುವಾರ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಲವು ರಾಜ್ಯಗಳ ರಾಜ್ಯ ಅಧ್ಯಕ್ಷರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಮತ್ತೊಮ್ಮೆ ದೊಡ್ಡ ಬಂಡಾಯದ ಚಿಹ್ನೆಗಳನ್ನು ತೋರಿಸುತ್ತಿದೆ. ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ. ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲದೆ ಬಿಎಸ್ಪಿ ಸ್ಪರ್ಧಿಸಲಿದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆಗೆ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯೇ ಕಾರಣ. ಯಾದವರ ಮತಗಳ ವಿಭಜನೆ ತಡೆಯಲು ಅಖಿಲೇಶ್ ಯಾದವ್ ವಿಫಲರಾದರು. ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಕಾರ್ಯಕ್ಷಮತೆ ನಿರೀಕ್ಷೆಗಳಿಗೆ ಅನುಗುಣವಾಗಿರಲಿಲ್ಲ ಎಂದು ಮಾಯಾವತಿ ಆರೋಪಿಸಿದ್ದಾರೆ.
ಸೋಮವಾರ ಬಿಎಸ್ಪಿ ಮುಖಂಡರೊಂದಿಗೆ ಮಾಯಾವತಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಉತ್ತರಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಬಿಎಸ್ಪಿ ಒಂಟಿಯಾಗಿ ಸ್ಪರ್ಧಿಸುವ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು "ಯಾದವರು ನಮಗೆ ಮತ ನೀಡದ ಕಾರಣ" ಮೈತ್ರಿ ವಿಫಲವಾಗಿದೆ ಎಂದು ಚರ್ಚಿಸಲಾಗಿದೆ. ಇದಕ್ಕೂ ಮೊದಲು ಭಾನುವಾರ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಲವು ರಾಜ್ಯಗಳ ರಾಜ್ಯ ಅಧ್ಯಕ್ಷರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಮತಗಳ ವರ್ಗಾವಣೆ ಬಗ್ಗೆ ಪ್ರಶ್ನಿಸಿದರು, ಈ ವೇಳೆ ಮುಖಂಡರು ಚುನಾವಣೆಯಲ್ಲಿ ಬಿಎಸ್ಪಿ ಮತಗಳು ಸಂಪೂರ್ಣವಾಗಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳಿಗೆ ಹೋಗಿದೆ. ಆದರೆ ಸಮಾಜವಾದಿ ಪಕ್ಷದ ಬೆಂಬಲಿಗರು ಬಿಎಸ್ಪಿ ಅಭ್ಯರ್ಥಿಗಳಿಗೆ ಹಲವು ಸ್ಥಳಗಳಲ್ಲಿ ಮತ ಚಲಾಯಿಸಲಿಲ್ಲ ಎಂದು ಮಾಹಿತಿ ನೀಡಿದರು. ಒಂದು ರೀತಿಯಲ್ಲಿ, ಸಮಾಜವಾದಿ ಪಕ್ಷ ಮತಗಳ ವರ್ಗಾವಣೆಯಲ್ಲಿ ವಿಫಲವಾಗಿರುವುದನ್ನು ಉಲ್ಲೇಖಿಸಿ ಮಾಯಾವತಿ ಎಸ್ಪಿ-ಬಿಎಸ್ಪಿ ಮೈತ್ರಿ ಭವಿಷ್ಯವನ್ನು ಬಹುಮಟ್ಟಿಗೆ ನಿರ್ಧರಿಸಿದ್ದಾರೆ.