ವಿಶಾಖಪಟ್ಟಣ: ಪ್ರಧಾನಿ ಹುದ್ದೆಗೆ ಅಭ್ಯರ್ಥಿ ಆಗುವ ಮಹತ್ವಾಕಾಂಕ್ಷೆ ವ್ಯಕ್ತಪಡಿಸಿದ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ನನಗೂ ಹೆಚ್ಚು ಅನುಭವವಿದೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅವಕಾಶ ಸಿಕ್ಕರೆ ಕೇಂದ್ರದಲ್ಲಿ ಉತ್ತಮ ಸರ್ಕಾರ ಒದಗಿಸಲು ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಪಡೆದ ಅನುಭವವನ್ನು ಬಳಸುತ್ತೇನೆ. ಜನರ ಅಭಿವೃದ್ಧಿಗಾಗಿ ಉಪಯೋಗಿಸುತ್ತೇನೆ ಎಂದು ಮಾಯಾವತಿ ಹೇಳಿದ್ದಾರೆ.


"ಒಂದು ವೇಳೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಅವಕಾಶ ಸಿಕ್ಕರೆ, ಉತ್ತರಪ್ರದೇಶದ ವಿಧಾನವನ್ನು ಅಳವಡಿಸಿಕೊಂಡು ಎಲ್ಲಾ ದೃಷ್ಟಿಕೋನಗಳಿಂದಲೂ ಉತ್ತಮ ಸರ್ಕಾರ ನೀಡುತ್ತೇವೆ" ಎಂದು ಮಾಯಾವತಿ ಹೇಳಿದರು. ತಾವು ಪ್ರಧಾನಿ ಅಭ್ಯರ್ಥಿಯಾಗಲು ಬಯಸುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಯಾವತಿ, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಎಲ್ಲಾ ವಿಚಾರಗಳೂ ಸ್ಪಷ್ಟವಾಗುತ್ತವೆ ಎಂದಿದ್ದಾರೆ.


ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಜನ ಸೇನಾ, ಮಾನಾ ಪಕ್ಷದೊಂದಿಗೆ ಮೈತ್ರಿಯೊಂದಿಗೆ ಸ್ಪರ್ಧಿಸುತ್ತಿರುವ ಬಹುಜನ ಸಮಾಜ ಪಕ್ಷ 25 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಅಲ್ಲದೆ, 175 ವಿಧಾನಸಭಾ ಕ್ಷೇತ್ರಗಳಲ್ಲಿ 21 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.