ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ (Mayawati) ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Uttar Pradesh Assembly Election) ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (Bahujan Samaj Party) ಹಿರಿಯ ನಾಯಕ ಹಾಗೂ ಸಂಸದ ಮಿಶ್ರಾ  ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮಾಜಿ ಮುಖ್ಯಮಂತ್ರಿ ಮಾಯಾವತಿ ಮತ್ತು ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್‌ಪಿ ಸಂಸದ ಸತೀಶ್ ಚಂದ್ರ ಮಿಶ್ರಾ (Satish Chandra Mishra) ಹೇಳಿದ್ದಾರೆ.


ಇದನ್ನೂ ಓದಿ: UP Election 2022: "ಉತ್ತರಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸ್ಥಾನಗಲ್ಲಿ ಗೆಲ್ಲಲಿದೆ"


ಮಾಯಾವತಿ ಈ ಹಿಂದೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಸಮಾಜವಾದಿ ಪಕ್ಷ (Samajavadi Party) 400 ಅಭ್ಯರ್ಥಿಗಳನ್ನು ಹೊಂದಿಲ್ಲ. ಹಾಗಿದ್ದ ಮೇಲೆ ಅವರು 400 ಸ್ಥಾನಗಳನ್ನು ಹೇಗೆ ಗೆಲ್ಲುತ್ತಾರೆ ಎಂದು ಮಿಶ್ರಾ ಪ್ರಶ್ನಿಸಿದ್ದಾರೆ.


ಸಮಾಜವಾದಿ ಪಕ್ಷವಾಗಲಿ ಅಥವಾ ಬಿಜೆಪಿಯಾಗಲಿ ಅಧಿಕಾರಕ್ಕೆ ಬರುವುದಿಲ್ಲ. ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.


ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14 ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 6 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 2017 ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) 19 ಸ್ಥಾನಗಳನ್ನು ಗೆದ್ದಿತ್ತು. 


ಇದನ್ನೂ ಓದಿ: Pig heart to Human:ಮಾನವನಿಗೆ 'ಹಂದಿ ಹೃದಯ' ಅಳವಡಿಸಿದ ವೈದ್ಯರ ತಂಡ 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.