MCD Election Results: ಆಮ್ ಆದ್ಮಿ ಪಕ್ಷಕ್ಕೆ ಬಹುಮತ, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ!
MCD Election Results 2022: 250 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು 134 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿಗ 104 ವಾರ್ಡ್‍ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.
ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(AAP)ಕ್ಕೆ ಸ್ಪಷ್ಟ ಬಹುಮತ ದೊರೆತಿದ್ದು, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾದಂತಾಗಿದೆ.
ಬುಧವಾರ ಮಧ್ಯಾಹ್ನದ ವೇಳೆಗೆ ಹೊರಬಿದ್ದ ಅಂತಿಮ ಫಲಿತಾಂಶದ ಪ್ರಕಾರ, 250 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು 134 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿ 104 ವಾರ್ಡ್‍ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ. 9 ವಾರ್ಡ್‍ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, 3 ವಾರ್ಡ್‍ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ: Free Ration: ಪಡಿತರ ಚೀಟಿದಾರರಿಗೆ ಇನ್ಮುಂದೆ ಉಚಿತವಾಗಿ ಸಿಗುತ್ತೆ 150 ಕೆಜಿ ಅಕ್ಕಿ: ಸರ್ಕಾರದಿಂದ ಮಹತ್ವದ ಘೋಷಣೆ
ಪಾಲಿಕೆ ಚುನಾವಣೆಗೆ ಮತದಾನ ನಡೆದಿತ್ತು. ಕೇವಲ ಶೇ.50.48ರಷ್ಟು ಅಂದರೆ ಒಟ್ಟು 1.45 ಕೋಟಿ ಅರ್ಹ ಮತದಾರರ ಪೈಕಿ ಕೇವಲ 73 ಲಕ್ಷ ಜನರು ತಮ್ಮ ಹಕ್ಕು ಚಲಾಯಿಸಿದ್ದರು.
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...