ದೆಹಲಿ: ನಾಗ್ರೊಟಾದಲ್ಲಿ ಉಗ್ರರ ಎನ್‌ಕೌಂಟರ್ ವಿಚಾರಕ್ಕೆ ಸಂಬಂಧಪಟ್ಟಂತೆ ಭಾರತವು ಪಾಕಿಸ್ತಾನ ಹೈಕಮಿಷನ್ ಗೆ ಸಮನ್ಸ್ ನೀಡಿದೆ.


COMMERCIAL BREAK
SCROLL TO CONTINUE READING

ದೆಹಲಿಯಲ್ಲಿರುವ ಪಾಕಿಸ್ತಾನದ ಹೈ ಕಮಿಷನ್ ಗೆ ಭಾರತ(India) ವಿದೇಶಾಂಗ ಸಚಿವಾಲಯವು ಜಮ್ಮು ಕಾಶ್ಮೀರದಲ್ಲಿ ದಾಳಿ ಪ್ರಕರಣದ ಸ್ಪಷ್ಟನೆಗಾಗಿ  ಸಮನ್ಸ್ ನೀಡಿದೆ. ಭಾರತವು ಈ ಘಟನೆಯನ್ನು ತೀವ್ರವಾಗಿ ಖಂಡಿಸಿ ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಗೆ ಪಾಕಿಸ್ತಾನ ಉಗ್ರರಿಗೆ ಬೆಂಬಲಿಸುವ ಕಾರ್ಯ ನಿಲ್ಲಿಸುವಂತೆ ಆಗ್ರಹಿಸಿ ಖಡಕ್ ಚ್ಚರಿಕೆ ನೀಡಿದೆ.


ಭಾರತದ ಈ ಹಳ್ಳಿಯಲ್ಲಿ ಪ್ರತಿ ವ್ಯಕ್ತಿಗೂ ಕರೋನಾ ಸೋಂಕು!


ಇದೆ ನ.19  ರಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರ ನಾಗ್ರೊಟಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿತ್ತು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದರು. ಎನ್ಕೌಂಟರ್ ನಲ್ಲಿ ಹತರಾದ ನಾಲ್ವರು ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಗೆ ಅಡ್ಡಿಯುಂಟು ಮಾಡುವ ಉದ್ದೇಶವನ್ನು ಹೊಂದಿದ್ದರು ಎಂಬ ವಿಚಾರ ಇತ್ತೀಚಿಗೆ ಬಹಿರಂಗಗೊಂಡಿತ್ತು.


Lakshmi Vilas Bank ವಿಲೀನದ ಬಗ್ಗೆ RBI ಏನು ಹೇಳಿದೆ?


ಎನ್ಕೌಂಟರ್ ಕುರಿತು ಮಾತನಾಡಿದ್ದ ಕಾಶ್ಮೀರದ ಐಜಿಪಿ ವಿಜಯ್ ಕುಮಾರ್, ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಪ್ರಕ್ರಿಯೆಯನ್ನು ನಾಶಪಡಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಇದಕ್ಕಾಗಿಯೇ ಕಳೆದ ಕೆಲವು ದಿನಗಳಿಂದ ಭಾರತದೊಳಗೆ ನುಸುಳುವಂತೆ ಉಗ್ರರಿಗೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ. ಆದರೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿರುವುದರಿಂದ ಉಗ್ರರ ನುಸುಳುವಿಕೆ ಪ್ರಯತ್ನಗಳು ವಿಫಲಗೊಳ್ಳುತ್ತಿವೆ. ಪ್ರಸ್ತುತ ಹತ್ಯೆಯಾಗಿರುವ ಈ ನಾಲ್ವರು ಉಗ್ರರು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುವ ಉದ್ದೇಶವನ್ನು ಹೊಂದಿದ್ದರು ಎಂದು ಹೇಳಿದ್ದಾರೆ.


ಮುಂದಿನ ತಿಂಗಳಿನಿಂದ Money Transfer ನಿಯಮದಲ್ಲಾಗಲಿದೆ ಬದಲಾವಣೆ... ನೀವೂ ತಿಳಿದುಕೊಳ್ಳಿ