ಚೆನ್ನೈ: Medical Admissions - ತಮಿಳುನಾಡು ವಿಧಾನಸಭೆಯಲ್ಲಿ ಮಸೂದೆಯೊಂದನ್ನು ಅಂಗೀಕರಿಸಲಾಗಿದ್ದು, ಈ ಮಸೂದೆ ಕಾನೂನಿನ ರೂಪ ಪಡೆದ ನಂತರ, ನೀಟ್ ಪರೀಕ್ಷೆಯನ್ನು ರಾಜ್ಯದಲ್ಲಿ ನಡೆಸಲಾಗುವುದಿಲ್ಲ ಎನ್ನಲಾಗಿದೆ. ಸಾಮಾಜಿಕ ನ್ಯಾಯವನ್ನು (Social Justice) ಖಚಿತಪಡಿಸಲು, ವೈದ್ಯಕೀಯ ಕಾಲೇಜುಗಳಲ್ಲಿ 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡಲಾಗುವುದು ಎಂದು ಮಸೂದೆಯಲ್ಲಿ ಹೇಳಲಾಗಿದೆ. ಅಲ್ಲದೆ, ಮಸೂದೆಯ ಪ್ರಕಾರ, ಶೇ. 7.5% Horizontal Reservation ಲಾಭವನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎನ್ನಲಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (CM MK Stalin) ಈ ಮಸೂದೆಯನ್ನು ಮಂಡಿಸಿದ್ದು, ಇದನ್ನು ಕಾಂಗ್ರೆಸ್, ಎಐಎಡಿಎಂಕೆ, ಪಿಎಂಕೆ ಮತ್ತು ಇತರ ಪಕ್ಷಗಳು ಕೂಡ ಬೆಂಬಲಿಸಿವೆ.


COMMERCIAL BREAK
SCROLL TO CONTINUE READING

BJPಯಿಂದ ವಿರೋಧ ವ್ಯಕ್ತವಾಗಿದೆ
ಮಸೂದೆಯ ನಿಬಂಧನೆಗಳ ಪ್ರಕಾರ, ವೈದ್ಯಕೀಯ, ದಂತ ಆರೈಕೆ, ಭಾರತೀಯ ಔಷಧ ಮತ್ತು ಹೋಮಿಯೋಪತಿಯಲ್ಲಿ 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ ಪದವಿ ಹಂತದ ಕೋರ್ಸ್‌ಗಳಿಗೆ ಪ್ರವೇಶವನ್ನು (Medical Admissions) ನೀಡಲಾಗುವುದು ಎನ್ನಲಾಗಿದೆ. ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸದನದಿಂದ ವಾಕ್ ಔಟ್ ನಡೆಸಿದೆ. ಈ ಮೊದಲು, ಸದನದ ಕಲಾಪ ಆರಂಭವಾದ ತಕ್ಷಣ, ವಿರೋಧ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಭಾನುವಾರ ತವರು ಜಿಲ್ಲೆ ಸೇಲಂನಲ್ಲಿ ಆತ್ಮಹತ್ಯೆ ಮಾಡಿಕೊಂಡ 19 ವರ್ಷದ ವಿದ್ಯಾರ್ಥಿ ಧನುಷ್ ಸಮಸ್ಯೆಯನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿಎಂಕೆ ನೀಟ್ ಅನ್ನು ರದ್ದುಗೊಳಿಸುವ ಭರವಸೆ ನೀಡಿತ್ತು ಆದರೆ ಅದನ್ನು ಮಾಡಲಾಗಿಲ್ಲ ಮತ್ತು ಅನೇಕ ವಿದ್ಯಾರ್ಥಿಗಳು ಅದಕ್ಕೆ ಸಿದ್ಧರಿಲ್ಲ ಎಂದು ಅವರು ಹೇಳಿದ್ದರು. ಪಳನಿಸ್ವಾಮಿ ಅವರ ಕೆಲವು ಹೇಳಿಕೆಗಳನ್ನು ಶಾಸಕಾಂಗ ಸಭೆಯ ಅಧ್ಯಕ್ಷ ಎಂ ಅಪ್ಪಾವು ರಿಕಾರ್ಡ್ ಮಾಡುವುದರಿಂದ ಕೈಬಿಟ್ಟಿದ್ದಾರೆ.


ಇದನ್ನೂ ಓದಿ-New PF Tax Rules: ನಿಮ್ಮ ಪ್ರಾವಿಡೆಂಟ್ ಫಂಡ್ ನಲ್ಲಿ ಎರಡು ಖಾತೆಗಳು, 9D ನಿಯಮದಿಂದ ನಿಮಗಾಗುವ ಬದಲಾವಣೆ ಏನು?


ಮುಖಾಮುಖಿಯಾದ AIADMK ಮತ್ತು DMK
ಇಂದು ಸದನಕ್ಕೆ ವಿರೋಧ ಪಕ್ಷದ ಶಾಸಕರು ಕಪ್ಪು ಬ್ಯಾಡ್ಜ್ ಧರಿಸಿ ಬಂದಿದ್ದರು ಮತ್ತು ಅವರು ಪಳನಿಸ್ವಾಮಿ ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದ್ದಾರೆ. ಸೇಲಂ ಸಮೀಪದ ಹಳ್ಳಿಯಲ್ಲಿ ವಾಸಿಸುತ್ತಿರುವ ಧನುಷ್, ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಭಯದಿಂದ ಭಾನುವಾರ ನೀಟ್ ಪರೀಕ್ಷೆಗೆ ಹಾಜರಾಗುವ ಕೆಲವು ಗಂಟೆಗಳ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಘಟನೆಯ ನಂತರ, ಎಐಎಡಿಎಂಕೆ ಮತ್ತು ಡಿಎಂಕೆ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿದ್ದವು. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಆರೋಪಿಸಿದೆ.


ಇದನ್ನೂ ಓದಿ-Covid-19 Vaccine: 5 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೂ ಕರೋನಾ ಲಸಿಕೆ


ಉನ್ನತ ಮಟ್ಟದ ಸಮಿತಿ ಶಿಫಾರಸ್ಸಿನ ಮೇಲೆ ತೀರ್ಮಾನ
ಮಸೂನೆ ಮಂಡನೆಯ ವೇಳೆ ಸದನದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸ್ಟಾಲಿನ್, ಪಳನಿಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ತಮಿಳುನಾಡಿನಲ್ಲಿ ಮೊದಲ ಬಾರಿಗೆ NEET ಪರೀಕ್ಷೆ ನಡೆಸಲಾಗಿತ್ತು ಮತ್ತು ಜಯಲಲಿತಾ ಮುಖ್ಯಮಂತ್ರಿಯಾಗಿದ್ದಾಗಲೂ ಇದನ್ನು ನಡೆಸಲಾಗಿರಲಿಲ್ಲ ಎಂದು ಹೇಳಿದ್ದಾರೆ.  ಇತ್ತೀಚಿನ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಲ್ಲ ವಿದ್ಯಾರ್ಥಿಗಳು ಪಳನಿಸ್ವಾಮಿಯವರ ಮುಖ್ಯಮಂತ್ರಿ ಅವಧಿಯಲ್ಲಿ ಎಂದು  ಅವರು ಹೇಳಿದ್ದಾರೆ. ಮಸೂದೆಯಲ್ಲಿನ ಉನ್ನತ ಮಟ್ಟದ ಸಮಿತಿಯ ಸಲಹೆಗಳನ್ನು ಉಲ್ಲೇಖಿಸಿ, ಪದವಿ ಹಂತದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್‌ನ ಅವಶ್ಯಕತೆಯನ್ನು ತೆಗೆದುಹಾಕಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಇಂತಹ ಕೋರ್ಸ್ ಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.


ಇದನ್ನೂ ಓದಿ-ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.