ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ 57 ಅಭ್ಯರ್ಥಿಗಳ ಪಟ್ಟಿಯನ್ನು ಇಂದು  ಕಾಂಗ್ರೆಸ್ ಬಿಡುಗಡೆ ಮಾಡಿದೆ.


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಎರಡು ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.


ಮೇಘಾಲಯ ವಿಧಾನಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದ್ದು, ಮಾರ್ಚ್ 3, 2018 ರಂದು ಫಲಿತಾಂಶ ಘೋಷಣೆಯಾಗಲಿದೆ.




ಜನವರಿ 30 ರಂದು ರಾಹುಲ್ ಗಾಂಧಿ ಅವರು ಪಕ್ಷದ ಚುನಾವಣಾ ಅಭಿಯಾನವನ್ನು ಆರಂಭಿಸಲಿದ್ದಾರೆ ಎಂದು ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. 7 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುವಂತೆ ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಜೌಯಿ ಪ್ರದೇಶದ ಟಿಪಪ್ ಪೇಲ್ ಆಟದ ಮೈದಾನದಲ್ಲಿ ಗಾಂಧಿಯವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ವಿನ್ಸೆಂಟ್ ಹೆಚ್. ಪಾಲಾ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ಗೆ "ಸ್ಟಾರ್ ಪ್ರಚಾರಕ" ಆಗಿದ್ದಾರೆ. "ಅವರ ಅಭಿಯಾನ ಖಂಡಿತವಾಗಿಯೂ ರಾಜ್ಯದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸುತ್ತದೆ ಮತ್ತು ಮೇಘಾಲಯದಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲಿದೆ" ಎಂದು ಅವರು ಹೇಳಿದರು.


ಏಳು ಶಾಸಕರ ನಿರ್ಗಮನದಿಂದ ಮತ್ತು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಡಿ.ಡಿ. ಲಪಾಂಗ್ ಸೇರಿದಂತೆ ಮುಉವರು ಹಿರಿಯ ಶಾಸಕರು ಚುನಾವಣಾ ರಾಜಕೀಯದಿಂದ ತಾವು "ನಿವೃತ್ತರಾಗಿರುವುದಾಗಿ" ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧೀ ಭೇಟಿ ಕಾಂಗ್ರೆಸ್ ಗೆ ಬಹಳ ಮುಖ್ಯವಾಗಿದೆ. 


ಪಕ್ಷವನ್ನು ತೊರೆದ ಏಳು ಶಾಸಕರ ಪೈಕಿ ಐವರು ರಾಷ್ಟ್ರೀಯ ಪೀಪಲ್ಸ್ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ.


2017 ರಲ್ಲಿ ವಜಾಗೊಳಿಸುವ ಮೊದಲು ಮುಕುಲ್ ಸಂಗ್ಮಾ ಕ್ಯಾಬಿನೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಅಲೆಕ್ಸಾಂಡರ್ ಹೆಕ್ ಅವರು ಬಿಜೆಪಿಗೆ ಸೇರಿದ್ದಾರೆ. ಖಾಸಿ ಹಿಲ್ಸ್ ಸ್ವಾಯತ್ತ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಪಿ.ಎನ್.ಸೈಯೀಮ್ ಹೊಸ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ಗೆ ಸೇರ್ಪಡೆಗೊಂಡಿದ್ದಾರೆ.