Periods Leave: ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರದ ಆದೇಶ
ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆ ಪರಿಗಣಿಸಿ ಎಲ್ಲಾ ವಿವಿಗಳಲ್ಲಿ ಋತುಚಕ್ರದ ರಜೆ ಜಾರಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ಹೇಳಿದ್ದಾರೆ.
ತಿರುವನಂತಪುರಂ: ಕೇರಳ ಸರ್ಕಾರವು ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡುವುದಾಗಿ ಸೋಮವಾರ ಘೋಷಿಸಿದೆ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಇಂತಹ ಮಹತ್ವದ ನಿರ್ಧಾರವನ್ನು ಸಿಎಂ ಪಿಣರಾಯಿ ವಿಜಯನ್ ತೆಗೆದುಕೊಂಡಿದ್ದಾರೆ.
ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಿಂದ (CUSAT) ತನ್ನ ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆ ಒದಗಿಸುವ ಸೂಚನೆಯನ್ನು ತೆಗೆದುಕೊಂಡ ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು, ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ವಿವಿಗಳಲ್ಲಿ ಇದನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಈ ಬಗ್ಗೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿರುವ ಅವರು, ‘ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ ಎಲ್ಲಾ ವಿವಿಗಳಲ್ಲಿ ಋತುಚಕ್ರದ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಹೇಳಿದ್ದಾರೆ. ಇತ್ತೀಚೆಗೆ ಕೊಚ್ಚಿನ್ ವಿವಿ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿರುವ ಅವರು, ಕೇರಳದಲ್ಲಿ ಮೊದಲ ಬಾರಿಗೆ ಶಿಕ್ಷಣ ಕೇಂದ್ರವು ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆಯನ್ನು ನೀಡಿದೆ ಎಂದು ಹೇಳಿದರು.
ಇದನ್ನೂ ಓದಿ: ದೈತ್ಯ ಮೊಸಳೆಯನ್ನು ಬೈಕ್ ಮೇಲೆ ಮಲಗಿಸಿ, ಬೈಕ್ ಸವಾರಿ! ಈ ವೈರಲ್ ವಿಡಿಯೋ ನೀವು ನೋಡಲೇಬೇಕು
ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ ಶೇ.75ರಷ್ಟು ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ ಶೇ.73ಕ್ಕೆ ಇಳಿಕೆ ಮಾಡಿದೆ. ಇದಲ್ಲದೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಪಿಣರಾಯಿ ವಿಜಯನ್, ‘ಮುಟ್ಟಿನ ರಜೆ ನಿರ್ಧಾರದ ಮೂಲಕ ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ. ಪ್ರಸ್ತುತ ಈ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ’ ಎಂದು ಹೇಳಿದ್ದರು.
ಇದನ್ನೂ ಓದಿ: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ : ಏರ್ ಇಂಡಿಯಾಗೆ 30 ಲಕ್ಷ ದಂಡ!
ಕಳೆದ ವಾರವಷ್ಟೇ ಸುಪ್ರೀಂಕೋರ್ಟ್‍ಗೆ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ಭಾರತದಾದ್ಯಂತ ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವು ರಜೆ ಅಥವಾ ಅವಧಿ ರಜೆಯನ್ನು ಪರಿಚಯಿಸುವಂತೆ ಒತ್ತಾಯಿಸಲಾಗಿತ್ತು. ಇದೀಗ ಕೇರಳ ಸರ್ಕಾರ ಹೊರಡಿಸಿರುವ ಈ ಆದೇಶವು ವಿವಿಯಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವವರು ಸೇರಿದಂತೆ ಎಲ್ಲಾ ಸ್ಟ್ರೀಮ್‌ಗಳ ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ ಮತ್ತು ತಕ್ಷಣದಿಂದಲೇ ಜಾರಿಗೆ ಬರುವ ನಿರೀಕ್ಷೆಯಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.