#Metoo: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಎಂ.ಜೆ.ಅಕ್ಬರ್
ಇತ್ತೀಚಿಗೆ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಮೇಲೆ ಬಂದಿದ್ದ ಲೈಂಗಿಕ ಕಿರುಕುಳದ ಆರೋಪದ ವಿಚಾರವಾಗಿ ಅವರು ಕಾನೂನು ಕ್ರಮವನ್ನು ತಗೆದುಕೊಂಡಿದ್ದಾರೆ. ಪತ್ರಕರ್ತೆ ಪ್ರಿಯಾ ರಮಣಿ ವಿರುದ್ದ ಅವರು ಮಾನಹಾನಿ ಕೇಸ್ ದಾಖಲಿಸಿದ್ದಾರೆ.
ನವದೆಹಲಿ: ಇತ್ತೀಚಿಗೆ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಮೇಲೆ ಬಂದಿದ್ದ ಲೈಂಗಿಕ ಕಿರುಕುಳದ ಆರೋಪದ ವಿಚಾರವಾಗಿ ಅವರು ಕಾನೂನು ಕ್ರಮವನ್ನು ತಗೆದುಕೊಂಡಿದ್ದಾರೆ. ಪತ್ರಕರ್ತೆ ಪ್ರಿಯಾ ರಮಣಿ ವಿರುದ್ದ ಅವರು ಮಾನಹಾನಿ ಕೇಸ್ ದಾಖಲಿಸಿದ್ದಾರೆ.
ಇತ್ತೀಚಿಗೆ ಮೀಟೂ ಅಭಿಯಾನದ ಭಾಗವಾಗಿ ಹಲವಾರು ಮಹಿಳಾ ಪತ್ರಕರ್ತೆಯರು ಸಚಿವರ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಹೊರಿಸಿದ್ದರು.ಈ ಆರೋಪ ಬಂದ ಬೆನ್ನಲ್ಲೇ ಸಚಿವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದವು.ಆದರೆ ಈ ಆರೋಪಗಳನ್ನು ಅಲ್ಲಗಳೆದಿರುವ ಸಚಿವ ಅಕ್ಬರ್ ಅವರು ಯಾವುದೇ ದಾಖಲೆಗಳು ಇಲ್ಲದೆ ಆರೋಪ ಮಾಡುವವರ ವಿರುದ್ದ ಕಾನೂನು ಕ್ರಮ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.
ಈ ಹಿನ್ನಲೆಯಲ್ಲಿ ಈಗ ದೂರಿನಲ್ಲಿ ಸಚಿವರು ಪ್ರಿಯಾ ಆರೋಪಗಳ ಕುರಿತ ಪೋಸ್ಟ್ ಅನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ , ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರುವಂತಹ ಆರೋಪಗಳನ್ನು ಪ್ರಿಯಾ ರಮಣಿ ಅವರು ಹೊರಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಈಗ ಸಚಿವರ ವಕೀಲ ಸಂದೀಪ್ ಕಪೂರ್ ಮೂಲಕ ದೂರು ದಾಖಲಿಸಲಾಗಿದೆ.
ಲೈಂಗಿಕ ಕಿರುಕುಳದ ವಿಚಾರವಾಗಿ ಪತ್ರಕರ್ತೆ ಪ್ರಿಯಾರಮಣಿ ಅವರು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ವಿರುದ್ದ ಬರೆದುಕೊಂಡಿದ್ದರು.ಈ ಹಿನ್ನಲೆಯಲ್ಲಿ ಈಗ ಅವರ ಮೇಲೆ ಈಗ ಸಚಿವರು ದೂರು ನೀಡಿದ್ದಾರೆ.