ಮುಂಬೈ : ವಾಣಿಜ್ಯ ನಗರಿಯಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಭಾರಿ ಏರಿಕೆ ಕಾಣುತ್ತಿವೆ, ನಗರದಲ್ಲಿ ಸಂಪೂರ್ಣ ಲಾಕ್‌ಡೌನ್ ಇಲ್ಲ ಎಂದು ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ಆದ್ರೆ, ಮಿನಿ-ಲಾಕ್‌ಡೌನ್‌ನಂತಹ ನಿರ್ಬಂಧಗಳನ್ನು ನಿರೀಕ್ಷಿಸಲಾಗಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾತನಾಡಿದ ಮೇಯರ್ ಕಿಶೋರಿ ಪೆಡ್ನೇಕರ್(Mayor Kishori Pednekar), ಹೊಸ ನಿರ್ಬಂಧಗಳೊಂದಿಗೆ ಮಾರ್ಗಸೂಚಿಗಳನ್ನು ಇಂದು (ಜನವರಿ 7) ಸಂಜೆ 7 ಗಂಟೆಗೆ ಹೊರಡಿಸಲಾಗುವುದು ಎಂದು ಹೇಳಿದರು.


ಇದನ್ನೂ ಓದಿ : Uttar Pradesh: ಚುನಾವಣೆಗೂ ಮೊದಲು ಸಾರ್ವಜನಿಕರಿಗೆ ಭರ್ಜರಿ ಗಿಫ್ಟ್ ನೀಡಿದ ಯೋಗಿ ಸರ್ಕಾರ


ಆಸ್ಪತ್ರೆಯ ಬೆಡ್‌ಗಳ ಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ಅವರು, ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) 22,000 ಹಾಸಿಗೆಗಳು ಮತ್ತು 7,000 ICU ಹಾಸಿಗೆಗಳೊಂದಿಗೆ ಸಿದ್ಧವಾಗಿದೆ ಎಂದು ಹೇಳಿದರು.


ಇದಕ್ಕೂ ಮುನ್ನ ಗುರುವಾರ ಮಹಾರಾಷ್ಟ್ರದಲ್ಲಿ(Maharashtra) 36,265 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ. ಗುರುವಾರ ಮಹಾರಾಷ್ಟ್ರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,14,847 ಆಗಿದೆ. ಮುಂಬೈನಲ್ಲಿ 36,265 ಹೊಸ ಕೋವಿಡ್-19 ಪ್ರಕರಣಗಳಲ್ಲಿ 20,181 ಹೊಸ ಸೋಂಕುಗಳು ದಾಖಲಾಗಿವೆ. ನಗರದಲ್ಲಿ ಕೋವಿಡ್-19 ನ ಸಕ್ರಿಯ ಪ್ರಕರಣಗಳು ಗುರುವಾರ 79,260 ರಷ್ಟಿದೆ. ರಾಜ್ಯದಲ್ಲಿ ನಿನ್ನೆ 13 ಜನ ಕೋವಿಡ್ ಗೆ ಬಲಿಯಾಗಿದ್ದಾರೆ. 8,907 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 65,33,154 ಕ್ಕೆ ತಲುಪಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.