ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ (Minor girl gang raped) ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಡಿಸೆಂಬರ್ 7 ರಂದು ಘಟನೆ ನಡೆದಿದ್ದು, ಡಿಸೆಂಬರ್ 11 ರಂದು ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.


7 ನೇ ತರಗತಿ ವಿದ್ಯಾರ್ಥಿನಿಯನ್ನು ಆಕೆಯ ತಂದೆಯ 25 ಮತ್ತು 26 ವರ್ಷದ ಇಬ್ಬರು ಸ್ನೇಹಿತರು ಬಾಲಕಿಯ ಮನೆಯ ಹಿತ್ತಲಿನಲ್ಲಿ ಅತ್ಯಾಚಾರ (gang rape) ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಅಗರವಾಲ್ ಹೇಳಿದ್ದಾರೆ.


ಆಕೆಯ ತಂದೆ ಕೂಲಿ ಕೆಲಸ ಮಾಡುತ್ತಿದ್ದು, ಘಟನೆ ನಡೆದಾಗ ಮನೆಯಿಂದ ಹೊರಗಿದ್ದರು. ನೆರೆಹೊರೆಯ ಮಹಿಳೆಯೊಬ್ಬರು ಡಿಸೆಂಬರ್ 11 ರಂದು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದರು. ನಂತರ ಪೊಲೀಸರು ಬಾಲಕಿಯ ಕುಟುಂಬವನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.


ರಂಝಿ ಪೊಲೀಸ್ ಠಾಣೆ ಪ್ರಭಾರಿ ವಿಜಯ್ ಪರಸ್ತೆ ಮಾತನಾಡಿ, ಕೌನ್ಸೆಲಿಂಗ್ ಬಳಿಕ ಬಾಲಕಿ ಈ ಬಗ್ಗೆ ಪೊಲೀಸರಿಗೆ ವಿವರಿಸಿದ್ದಾಳೆ ಎಂದು ಹೇಳಿದರು.


ಆರೋಪಿಗಳಿಬ್ಬರನ್ನೂ ಭಾನುವಾರ ಬಂಧಿಸಲಾಗಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: Shocking:ಕಾರ್ಗೋ ಕಂಪಾರ್ಟ್‌ಮೆಂಟ್‌ನಲ್ಲಿ ನಿದ್ದೆಗೆ ಜಾರಿದ ಇಂಡಿಗೋ ಸಿಬ್ಬಂದಿ.. ಮುಂದಾಗಿದ್ದೇನು?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.