ನವದೆಹಲಿ: ಸೋಷಿಯಲ್ ಮೀಡಿಯಾ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿ ಸೋಷಿಯಲ್ ಮೀಡಿಯಾ ದುರುಪಯೋಗ ಅತ್ಯಂತ ಅಪಾಯಕಾರಿ ಎಂದು ನ್ಯಾಯಾಲಯ ಹೇಳಿದೆ. ಈ ಬಗ್ಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ನ್ಯಾಯಮೂರ್ತಿ ದೀಪಕ್ ಗುಪ್ತಾ, ಈ ಕುರಿತು ಕೇಂದ್ರ ಸರ್ಕಾರವೇ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಎರಡೂ ಇದರ ಮಾರ್ಗಸೂಚಿ ನೀಡಲು ಸಾಧ್ಯವಿಲ್ಲ, ಆದರೆ ಸರ್ಕಾರ ಮಾತ್ರ ಇದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದರು.
ಸಾಮಾಜಿಕ ಮಾಧ್ಯಮಗಳಿಗೆ ಕಠಿಣ ಮಾರ್ಗಸೂಚಿಗಳನ್ನು ನೀಡಬೇಕು. 'ಸಾಮಾಜಿಕ ಮಾಧ್ಯಮದಲ್ಲಿ ನನ್ನ(ವೈಯಕ್ತಿಕ) ಗೌಪ್ಯ ಮಾಹಿತಿ ಸುರಕ್ಷಿತವಲ್ಲ, ನಾನು ಸ್ಮಾರ್ಟ್‌ಫೋನ್ ಬಿಡುವ ಬಗ್ಗೆ ಯೋಚಿಸುತ್ತಿದ್ದೇನೆ' ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದರು.
ವ್ಯಕ್ತಿಯ ಗೌಪ್ಯತೆ ಮತ್ತು ಪ್ರತಿಷ್ಠೆ ಮತ್ತು ದೇಶದ ಸಾರ್ವಭೌಮತ್ವದ ನಡುವೆ ಸಮತೋಲನವನ್ನು ಸಾಧಿಸುವ ಅವಶ್ಯಕತೆಯಿದೆ ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಾಲಯ, ಸೋಷಿಯಲ್ ಮೀಡಿಯಾದ ದುರುಪಯೋಗವನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸಲು ಎಷ್ಟು ಸಮಯ ಬೇಕಾಗಬಹುದು ಎಂಬುದರ ಬಗ್ಗೆ ಮೂರು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ.
ಸೋಷಿಯಲ್ ಮೀಡಿಯಾದ ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ದೀಪಕ್ ಗುಪ್ತಾ, 'ಜನರು ಸೋಷಿಯಲ್ ಮೀಡಿಯಾದಲ್ಲಿ AK47 ಅನ್ನು ಸಹ ಖರೀದಿಸಬಹುದು. ಅವರು ಒಬ್ಬರು ಸ್ಮಾರ್ಟ್ಫೋನ್ ತ್ಯಜಿಸಿ ಮತ್ತೆ ಫೀಚರ್ ಫೋನ್‌ಗೆ ಹಿಂತಿರುಗಬೇಕು ಎಂದು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹೇಳಿದರು. ಸರ್ಕಾರವು ಅತ್ಯಂತ ಶಕ್ತಿಶಾಲಿಯಾಗಿದೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸಬಲ್ಲದು. ಅಂತಹ ಸಂದರ್ಭದಲ್ಲಿ ಅದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಿಯ ಗೌಪ್ಯತೆ ಕಾಪಾಡಲು ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು ಮತ್ತು ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು.
ಆನ್‌ಲೈನ್ ಅಪರಾಧಿಗಳನ್ನು ಪತ್ತೆಹಚ್ಚುವ ಅಗತ್ಯವಿದೆ ನಮ್ಮಲ್ಲಿ ಈ ತಂತ್ರಜ್ಞಾನವಿಲ್ಲ ಎಂದು ಹೇಳುವುದನ್ನು ನಾವು ಬಿಡಲು ಸಾಧ್ಯವಿಲ್ಲ. ನಾವು ದುಷ್ಕರ್ಮಿಗಳಿಗೆ ಪಾಠ ಕಲಿಸಬೇಕಾಗಿದೆ. ವೈಯಕ್ತಿಕ ಗೌಪ್ಯತೆ ಮತ್ತು ದೇಶದ ಸಾರ್ವಭೌಮತ್ವದ ನಡುವೆ ಸಮತೋಲನ ಇರಬೇಕು ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.
ವಾಸ್ತವವಾಗಿ, ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ವಾಟ್ಸಾಪ್ ಮತ್ತು ಫೇಸ್‌ಬುಕ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಿವೆ. ಈ ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ ಹಲವು ಅರ್ಜಿಗಳು ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿವೆ.
ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳನ್ನು ಆಧಾರ್‌ಗೆ ಲಿಂಕ್ ಮಾಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೋರಿತ್ತು. ಸಾಮಾಜಿಕ ತಾಣಗಳನ್ನು ನಿಯಂತ್ರಿಸಲು ಯಾವುದೇ ಮಾರ್ಗಸೂಚಿಗಳನ್ನು ಮಾಡಲಾಗುತ್ತಿದೆಯೇ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಬೇಕಾಗಿದೆ.