ನವದೆಹಲಿ: ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಮಂಗಳವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರದಂದು ಅವು ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.ಈ ತಿಂಗಳ ಆರಂಭದಲ್ಲಿ, ರಾಜ್ ಠಾಕ್ರೆ ತಮಗೆ ಮೊಣಕಾಲು ಮತ್ತು ಬೆನ್ನುನೋವಿನ ಸಮಸ್ಯೆಗಳಿರುವುದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದ್ದರು.


COMMERCIAL BREAK
SCROLL TO CONTINUE READING

ಈಗ ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಂಎನ್‌ಎಸ್ ನಾಯಕ ನಿತಿನ್ ಸರ್ದೇಸಾಯಿ, ಬುಧವಾರದಂದು ಸೊಂಟದ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ ಠಾಕ್ರೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿ ಸುದ್ದಿಯಲ್ಲಿದ್ದ ರಾಜ್ ಠಾಕ್ರೆ ಅವರು ಜೂನ್ 5 ರಂದು ಅವರು ಅಯೋಧ್ಯೆಗೆ ಭೇಟಿ ನೀಡಬೇಕಿತ್ತು, ಆದರೆ ಸದ್ಯಕ್ಕೆ ಅವರು ಈ ಕಾರ್ಯಕ್ರಮವನ್ನು ಮುಂದೂಡಿದ್ದಾರೆ.ಈ ಬಗ್ಗೆ ಸ್ವತಃ ರಾಜ್ ಠಾಕ್ರೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.


ರಾಜ್ ಠಾಕ್ರೆ ಅವರು ಅಯೋಧ್ಯೆಗೆ ಪ್ರವಾಸ ಕೈಗೊಳ್ಳುವುದನ್ನು ಖಚಿತಪಡಿಸುತ್ತಿದ್ದಂತೆ ಇತ್ತ ಕಡೆ ಬಿಜೆಪಿ ಸಂಸದ ಬ್ರಜ್ ಭೂಷಣ್ ಅವರು ರಾಜ್ ಠಾಕ್ರೆ ಅವರು ಉತ್ತರ ಭಾರತೀಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿರುವುದರಿಂದ, ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.ಮಹಾವಿಕಾಸ್ ಅಘಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನಂತರ ಅವರ ಪಕ್ಷದ ಮುಸ್ಲಿಂ ಪದಾಧಿಕಾರಿಗಳು ಪಕ್ಷವನ್ನು ತೊರೆದರು.ಪುಣೆ ತಾಲೂಕು ಅಧ್ಯಕ್ಷ ಜಮೀರ್ ಸಯ್ಯದ್ ರಾಜೀನಾಮೆ ನೀಡಿದ್ದರು.ಇದಲ್ಲದೇ ರಾಜ್ ಹೇಳಿಕೆಗೆ ಹಲವು ಮುಸ್ಲಿಂ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು.ರಾಜ್‌ ಠಾಕ್ರೆ ಅವರಿಗೆ ಇಫ್ತಾರ್‌ ಕೂಟ ಏರ್ಪಡಿಸಿದ್ದು, ಸಹೋದರತ್ವ ಮೂಡಲಿ ಎಂದು, ಆದರೂ ಅವರು ಔರಂಗಾಬಾದ್‌ನಲ್ಲಿ ನಡೆದ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಸಂಸದ ಜಲೀಲ್‌ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.