ಪ್ರಯಾಗರಾಜ್: ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇನ್ಮುಂದೆ ಮೊಬೈಲ್ ಬಳಸುವಂತಿಲ್ಲ ಎಂದು ಮೊಬೈಲ್ ಬಳಕೆಗೆ ನಿಷೇಧ ಹೇರಿ ಉನ್ನತ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ನೂತನ ನಿಯಮದ ಪ್ರಕಾರ, ಕಾಲೇಜು ಅಥವಾ ವಿಶ್ವವಿದ್ಯಾಲಯದೊಳಗೆ ವಿದ್ಯಾರ್ಥಿಗಳಷ್ಟೇ ಅಲ್ಲದೆ ಶಿಕ್ಷಕರೂ ಸಹ ಕ್ಯಾಂಪಸ್ ಒಳಗೆ ಮೊಬೈಲ್ ಫೋನ್ ಬಳಸುವಂತಿಲ್ಲ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಮಾಡಲು ಉನ್ನತ ಶಿಕ್ಷಣ ನಿರ್ದೇಶನಾಲಯ ಈ ನಿಯಮವನ್ನು ಜಾರಿಗೆ ತಂದಿದೆ.


ಒಂದು ವೇಳೆ, ವಿದ್ಯಾರ್ಥಿಗಳಾಗಲೀ ಅಥವಾ ಶಿಕ್ಷಕರಾಗಲೀ, ಈ ನಿಯಮವನ್ನು ಉಲ್ಲಂಘಿಸಿದ್ದೇ ಆದಲ್ಲಿ ಮೊಬೈಲ್ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ವಿಶ್ವವಿದ್ಯಾನಿಲಯಗಳು ಮತ್ತು ಪದವಿ ಕಾಲೇಜುಗಳು ಅಥವಾ ತರಗತಿ ಕೋಣೆಗಳಲ್ಲಿ, ವಿದ್ಯಾರ್ಥಿಗಳು ಮೊಬೈಲ್, ವಾಟ್ಸಾಪ್ ಅಥವಾ ಗೇಮ್ ಆಡುವುದು ಕಂಡುಬಂದರೆ, ಅವರ ಮೊಬೈಲ್ ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಅಲ್ಲದೆ, ವಶಪಡಿಸಿಕೊಂಡ ಮೊಬೈಲ್ ಅನ್ನು ಹಿಂತಿರುಗಿಸುವುದಿಲ್ಲ. ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.