ನವದೆಹಲಿ: ಗುಜರಾತ್‌ನಲ್ಲಿ ಬುಧವಾರ ಲಘು ಭೂಕಂಪ ಸಂಭವಿಸಿದ್ದು, ಐದು ಸ್ಥಳಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.


COMMERCIAL BREAK
SCROLL TO CONTINUE READING

ಸುಮಾರು 3.8 ತೀವ್ರತೆಯ ಭೂಕಂಪವು ಮಾಹುವಾವನ್ನು ಅಪ್ಪಳಿಸಿದರೆ, ಜಮ್ನಗರ ಮತ್ತು ಬಚೌದಲ್ಲಿ ಕ್ರಮವಾಗಿ 2.6 ಮತ್ತು 2.4 ತೀವ್ರತೆಯ ಭೂಕಂಪ ದಾಖಲಾಗಿದೆ.


ಭೂಮಿ ಕಂಪಿಸುತ್ತಿದ್ದಂತೆಯೇ ಜನರು ಭಯಗೊಂಡು ಮನೆಯಿಂದ ಹೊರಬಂದಿದ್ದು, ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ, ಆಸ್ತಿ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. 


ಕಳೆದ ತಿಂಗಳಷ್ಟೇ ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ 3.2 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು. ಇದಕ್ಕೂ ಮುನ್ನ ಆಗಸ್ಟ್ ತಿಂಗಳಿನಲ್ಲಿ ಗುಜರಾತಿನ ಕಚ್ ಜಿಲ್ಲೆಯಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿತ್ತು.