Atma Nirbhar Swastha Bharat Yojana - ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಗೆ (PMANSBY) ಕೇಂದ್ರ ಸಚಿವ ಸಂಪುಟ (Modi Cabinet) ಬುಧವಾರ ಅನುಮೋದನೆ ನೀಡಿದೆ. ಇದು ಒಟ್ಟು 64 ಸಾವಿರ ಕೋಟಿ ರೂಪಾಯಿಗಳ ಯೋಜನೆಯಾಗಿದೆ. ಮೂಲಗಳು ಬುಧವಾರ ಈ ಮಾಹಿತಿಯನ್ನು ನೀಡಿವೆ. ಈ ಯೋಜನೆಯಡಿ, ಎಲ್ಲಾ ಜಿಲ್ಲೆಗಳಲ್ಲಿ ಮತ್ತು 3,382 ಬ್ಲಾಕ್‌ಗಳಲ್ಲಿ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ (Finance Minister Nirmala Sitharaman) ತಮ್ಮ 2021-22ರ ಬಜೆಟ್ ಭಾಷಣದಲ್ಲಿ ಈ ಯೋಜನೆಯ ಕುರಿತು ಘೋಷಣೆ ಮಾಡಿದ್ದರು. ಈ ಕುರಿತು ತಮ್ಮ ಬಜೆಟ್ ಭಾಷಣದಲ್ಲಿ (Budget Speech 2020-21) ಹೇಳಿಕೆ ನೀಡಿದ್ದ ವಿತ್ತ ಸಚಿವೆ, ಮುಂದಿನ ಆರು ವರ್ಷಗಳಲ್ಲಿ ಈ ಯೋಜನೆಯಡಿ ಸುಮಾರು 64, 180 ರೂಗಳನ್ನು ವೆಚ್ಚಮಾಡಲಾಗುವುದು ಎಂದು ಮಾಹಿತಿ ನೀಡಿದ್ದರು. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಈ ಯೋಜನೆ ರಾಷ್ಟ್ರೀಯ ಆರೋಗ್ಯ ಮಿಶನ್ (National Health Mission) ಗಿಂತ ಭಿನ್ನವಾಗಿರಲಿದೆ ಎನ್ನಲಾಗಿದೆ.


ಇದನ್ನೂ ಓದಿ-ನೀವೂ ಕೆಲಸ ಕಳೆದುಕೊಂಡಿದ್ದೀರಾ ? ಹಾಗಿದ್ದರೆ ನಿರುದ್ಯೋಗ ಭತ್ಯೆಗಾಗಿ ಇಲ್ಲಿ ನೋಂದಾಯಿಸಿಕೊಳ್ಳಿ


ಮುಖ್ಯಾಂಶಗಳು
>> ಹೈ ಫೋಕಸ್ ಆಗಿರುವ 10 ರಾಜ್ಯಗಳಲ್ಲಿ 17,788 ಗ್ರಾಮೀಣ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಬೆಂಬಲ.
>> ಎಲ್ಲಾ ರಾಜ್ಯಗಳಲ್ಲಿ 11,024 ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆ.
>> ಎಲ್ಲಾ ಜಿಲ್ಲೆಗಳಲ್ಲಿ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳ ಸ್ಥಾಪನೆ ಮತ್ತು 11 ಹೆಚ್ಚಿನ ಗಮನವಿರುವ ರಾಜ್ಯಗಳಲ್ಲಿ 3382 ಬ್ಲಾಕ್ ಸಾರ್ವಜನಿಕ ಆರೋಗ್ಯ ಘಟಕಗಳನ್ನು ಸ್ಥಾಪನೆ.
>> 602 ಜಿಲ್ಲೆಗಳು ಮತ್ತು 12 ಕೇಂದ್ರ ಸಂಸ್ಥೆಗಳಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ಬ್ಲಾಕ್‌ಗಳ ಸ್ಥಾಪನೆ.
>> ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (NCDC) ಮತ್ತು ಆದರ 5 ಪ್ರಾದೇಶಿಕ ಶಾಖೆಗಳು ಮತ್ತು 20 ಮಹಾನಗರ ಆರೋಗ್ಯ ಕಣ್ಗಾವಲು ಘಟಕಗಳ ಬಲವರ್ಧನೆ.


ಇದನ್ನೂ ಓದಿ-SBI Loan Rate- ಎಸ್‌ಬಿಐ ಸಾಲ ಅಗ್ಗ! ಬಡ್ಡಿ ದರ ಕಡಿತ, ಗೃಹ ಸಾಲ, ಆಟೋ ಇಎಂಐ ಇಳಿಕೆ

>> ಎಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸಂಪರ್ಕಿಸಲು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸಮಗ್ರ ಆರೋಗ್ಯ ಮಾಹಿತಿ ಪೋರ್ಟಲ್ ವಿಸ್ತರಣೆ.
>> 17 ಹೊಸ ಸಾರ್ವಜನಿಕ ಆರೋಗ್ಯ ಘಟಕಗಳ ಕಾರ್ಯಾಚರಣೆ ಮತ್ತು ಈಗಿರುವ 33 ಸಾರ್ವಜನಿಕ ಆರೋಗ್ಯ ಘಟಕಗಳನ್ನು ಬಲವರ್ಧನೆ. ಇವು 32 ವಿಮಾನ ನಿಲ್ದಾಣಗಳು, 11 ಬಂದರುಗಳು ಮತ್ತು 7 ಲ್ಯಾಂಡ್ ಕ್ರಾಸಿಂಗ್‌ಗಳಲ್ಲಿವೆ.
>> 15 ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರಗಳು ಮತ್ತು 2 ಸಂಚಾರಿ ಆಸ್ಪತ್ರೆಗಳ ಸ್ಥಾಪನೆ.


ಇದನ್ನೂ ಓದಿ-Coronavirus: ಇನ್ನೂ ಎಷ್ಟು ದಿನ ಇರುತ್ತೆ ಈ ಸಾಂಕ್ರಾಮಿಕ ರೋಗ? ಕಳವಳಕಾರಿ ವಿಷಯ ಹೇಳಿದ WHO


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.