ನವದೆಹಲಿ: ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸಿಕೊಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ "ಎಲ್ಲಾ ರಾಷ್ಟ್ರೀಯವಾದಿ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಹುಲ್, ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ಫಾರೂಕ್ ಅಬ್ದುಲ್ಲಾ ಅವರಂತಹ ರಾಷ್ಟ್ರೀಯವಾದಿ ನಾಯಕರನ್ನು ಬಂಧಿಸುವ ಮೂಲಕ ಅವರಂತಹ ನಾಯಕರನ್ನು ಮುಗಿಸಲು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ಕಾಶ್ಮೀರವನ್ನು ಭಾರತದ ಉಳಿದ ಭಾಗಗಳನ್ನು ಧ್ರುವೀಕರಿಸಲು ರಾಜಕೀಯ ಸಾಧನವಾಗಿ ಶಾಶ್ವತವಾಗಿ ಬಳಸುವ ಸಾಧ್ಯತೆ ಇದೆ ಎಂದು ಅವರು ಟೀಕಿಸಿದ್ದಾರೆ.


ಇದೇ ವೇಳೆ, ಈ ಕೂಡಲೇ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ ಅವರ ಬಿಡುಗಡೆಗೆ ಒತ್ತಾಯಿಸಿರುವ ರಾಹುಲ್ ಗಾಂಧಿ, "ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಜಾಗವನ್ನು ಸೃಷ್ಟಿಸುವುದನ್ನು ಸರ್ಕಾರ ನಿಲ್ಲಿಸಬೇಕು ಮತ್ತು ಎಲ್ಲಾ ರಾಷ್ಟ್ರೀಯತಾವಾದಿ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು" ಎಂದು ಟ್ವೀಟ್ ಮಾಡಿದ್ದಾರೆ.


ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ.