ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 


COMMERCIAL BREAK
SCROLL TO CONTINUE READING

ಭಾರತದಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಆ ನೀರಿನ ಹರಿವನ್ನು ಜಮ್ಮು-ಕಾಶ್ಮೀರ ಮತ್ತು ಪಂಜಾಬ್ ಕಡೆಗೆ ತಿರುಗಿಸಲು ಮೋದಿ ಸರ್ಕಾರ್ ನಿರ್ಧರಿಸಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಪ್ರಧಾನಿ ಮೋದಿ ನೇತೃತ್ವದಲ್ಲಿ, ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ನೀಡುತ್ತಿದ್ದ ನೀರಿನ ಪಾಲನ್ನು ತಡೆಯಲು ನಿರ್ಧರಿಸಿದೆ.  ಪೂರ್ವ ಭಾಗದ ನದಿಗಳ ನೀರಿನ ಹರಿವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಕಡೆಗೆ ಹರಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದ್ದಾರೆ.



ಮತ್ತೊಂದು ಟ್ವೀಟ್'ನಲ್ಲಿ ರಾವಿ ನದಿಗೆ ಶಾಹ್ಪುರ-ಕಂದಿಯಲ್ಲಿ ಆಣೆಕಟ್ಟು ನಿರ್ಮಾಣ ಆರಂಭವಾಗಿವೆ. UJH ಯೋಜನೆಯು ನಮ್ಮ ಪಾಲಿನ ನೀರನ್ನು ಜಮ್ಮು-ಕಾಶ್ಮೀರದ ನೀರಿನ ಅಗತ್ಯತೆಯನ್ನು ಪೂರೈಸಲು ಸಂಗ್ರಹಿಸಲಿದೆ. ಅಲ್ಲದೆ, ಉಳಿದ ನೀರನ್ನು ಇತರ ರಾಜ್ಯಗಳ ಜಲಾನಯನ ಪ್ರದೇಶಗಳಿಗೆ ಪೂರೈಸಲಾಗುವುದು ಎಂದು ಹೇಳಿದ್ದಾರೆ.