ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ. ಬಿಜೆಪಿ ರಾಷ್ಟ್ರೀಯ ವರ್ಷಾಚರಣೆಯ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವುದರಿಂದ ಸರಳವಾಗಿ ವರ್ಷಾಚರಣೆ ಮಾಡಲು ನಿರ್ಧರಿಸಿದೆ.


COMMERCIAL BREAK
SCROLL TO CONTINUE READING

ತಮ್ಮ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪತ್ರ ಬರೆದಿದ್ದಾರೆ. ಪತ್ರದಲ್ಲಿ 2014ರಿಂದ 2020ರವರೆಗೆ ಆರು ವರ್ಷಗಳಲ್ಲಿ ಏನೇನು ಸಾಧನೆ ಮಾಡಲಾಗಿದೆ ಎಂಬ ಅಂಶಗಳನ್ನು ಉಲ್ಲೇಖಿಸಿದ್ದಾರೆ.


ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ(BJP)ಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಇಂದು‌ ದೇಶಾದ್ಯಂತ ಒಂದು ಸಾವಿರ  ವರ್ಚ್ಯುಯಲ್ ರ್ಯಾಲಿಗಳನ್ನು ನಡೆಸಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಲಿದ್ದಾರೆ.


ಜೊತೆಗೆ ಇಂದು ಬೆಳಿಗ್ಗೆ ಬೆಳಿಗ್ಗೆ 11.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಸಾಮಾಜಿಕ ತಾಣಗಳ ಮೂಲಕ ಭಾಷಣ ಮಾಡಲಿದ್ದಾರೆ. 


ಇದಲ್ಲದೆ ಕೇಂದ್ರ ಸರ್ಕಾರದ ವತಿಯಿಂದ ಇಂದು ಪ್ರಧಾನ ಮಂತ್ರಿ ಕೂಡ ದೇಶ ಉದ್ದೇಶಿಸಿ ಮಾತನಾಡುವ ಸಂಭವ ಇದೆ ಎನ್ನಲಾಗುತ್ತಿದೆ.