ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆ
Varanasi : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
PM Modi Road Show in Varanasi Today : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಜೂನ್ 1ರಂದು ನಡೆಯಲಿರುವ ಲೋಕಸಭಾ ಚುನಾವಣೆಯ 7ನೇ ಹಂತದ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಅಂದು ವಾರಾಣಸಿ ಲೋಕಸಭಾ ಕ್ಷೇತ್ರಕ್ಕೂ ಮತದಾನ ನಡೆಯಲಿದೆ ಹಾಗೂ ವಾರಣಾಸಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನರೇಂದ್ರ ಮೋದಿ ಮತದಾನ ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ಪ್ರಧಾನಿ ಮೋದಿ ಅವರು ಸತತ ಮೂರನೇ ಬಾರಿಗೆ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಇದನ್ನು ಓದಿ : Salaar 2 : ಸಲಾರ್ ಸೀಕ್ವೆಲ್ ನಲ್ಲಿ ಪವರ್ ಪ್ಯಾಕ್ಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಪ್ರಭಾಸ್ !!
ಲೋಕಸಭಾ ಚುನಾವಣೆಯ ಕೊನೆಯ ಹಾಗೂ 7ನೇ ಹಂತದಲ್ಲಿ ಜೂನ್ 1ರಂದು ವಾರಾಣಸಿ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಕಾಂಗ್ರೆಸ್ ಪಕ್ಷವು ಇಲ್ಲಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರನ್ನು ಸ್ಪರ್ಧೆಗಿಳಿಸಿದೆ. ಬಿಎಸ್‌ಪಿಯ ಅತ್ತರ್ ಜಮಾಲ್ ಅವರೂ ಕಣದಲ್ಲಿದ್ದಾರೆ. ಮತ್ತು ಕಾಂಗ್ರೆಸ್ ಪಕ್ಷವು ಇಲ್ಲಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರನ್ನು ಸ್ಪರ್ಧೆಗಿಳಿಸಿದೆ. ಬಿಎಸ್‌ಪಿಯ ಅತ್ತರ್ ಜಮಾಲ್ ಅವರೂ ಕಣದಲ್ಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್ ಶೋ ನಡೆಸಲಿದ್ದಾರೆ ಮತ್ತು ಇದಾದ ಬಳಿಕ ನಾಳೆ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ (ಮಂಗಳವಾರ) ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನರೇಂದ್ರ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.
ಇದನ್ನು ಓದಿ : ಕಾರ್‌ಗೆ ಅಡ್ಡ ಹಾಕಿ ನಟನ ಮೇಲೆ ಹಲ್ಲೆ ಮಾಡಿರೋ ಕುಡುಕರು
ಇಂದು ಸಂಜೆ ವಾರಣಾಸಿಯಲ್ಲಿ ನಡೆಯಲಿರುವ ರೋಡ್ ಶೋ ನಗರದ ಮಾಳವೀಯಾ ಚೌರಾಹಾದಿಂದ ಶ್ರೀ ಕಾಶಿ ವಿಶ್ವನಾಥ ಧಾಮದವರೆಗೆ ನಡೆಯಲಿದೆ . ಸುಮಾರು 5,000ಕ್ಕೂ ಹೆಚ್ಚು ಮಹಿಳೆಯರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಚಿವರು ಮತ್ತು ಶಾಸಕರು ಕೂಡ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ
ರೋಡ್ ಶೋ ಮುಗಿದ ಬಳಿಕ ರಾತ್ರಿ ಬಿಎಲ್‌ಡಬ್ಲೂ ಅತಿಥಿಗೃಹದಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಲಿದ್ದಾರೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.