Modi Surname Case: ಸುಪ್ರೀಂಕೋರ್ಟ್ ಗೆ ಮೊರೆಹೋದ ರಾಹುಲ್ ಗಾಂಧಿ
ಈ ವರ್ಷದ ಆರಂಭದಲ್ಲಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾದ `ಮೋದಿ ಉಪನಾಮ` ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನವದೆಹಲಿ: ಈ ವರ್ಷದ ಆರಂಭದಲ್ಲಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾದ 'ಮೋದಿ ಉಪನಾಮ' ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಅವರನ್ನು ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.
ಇದನ್ನೂ ಓದಿ: ರಾಜ್ಯದ ಮೊದಲ ಆಸ್ಟ್ರೊ ಫಾರ್ಮ್ ಸೃಷ್ಟಿಸಿದ ರೈತನ ಮಗ
ಏಪ್ರಿಲ್ 13, 2019 ರಂದು ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ" ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಹೊಂದಿರುವುದೇಕೆ? ಎಂದು ಪ್ರಶ್ನಿಸಿದ್ದರು.ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.ಈಗ ಅವರಿಗೆ ಸೆಷನ್ಸ್ ನ್ಯಾಯಾಲಯ ಅಥವಾ ಗುಜರಾತ್ ಹೈಕೋರ್ಟ್ ನಿಂದ ಯಾವುದೇ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಅವರು ಈಗ ಸುಪ್ರಿಂಕೋರ್ಟ್ ನ ಮೊರೆಹೋಗಿದ್ದಾರೆ.
2019 ರಲ್ಲಿ ಕೇರಳದ ವಯನಾಡ್‌ನಿಂದ ಲೋಕಸಭೆಗೆ ಚುನಾಯಿತರಾದ 53 ವರ್ಷದ ರಾಹುಲ್ ಗಾಂಧಿ ಅವರನ್ನು ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿದ ನಂತರ ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಂಸತ್ ಸದಸ್ಯರಾಗಿ ಅನರ್ಹಗೊಳಿಸಲಾಯಿತು. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ಅವರನ್ನು ಅಪರಾಧಿ ಎಂದು ಘೋಷಿಸಲಾಯಿತು.
ಇದನ್ನೂ ಓದಿ: ಜುಲೈ 19ರಿಂದ ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆ ಜಾರಿ
ರಾಹುಲ್ ಗಾಂಧಿ ವಿರುದ್ಧ 10 ಪ್ರಕರಣಗಳು ಬಾಕಿ ಇವೆ. ಕೇಂಬ್ರಿಡ್ಜ್‌ನಲ್ಲಿ ವೀರ್ ಸಾವರ್ಕರ್ ವಿರುದ್ಧ ಗಾಂಧಿ ಪದಗಳನ್ನು ಬಳಸಿದ ನಂತರ ಪುಣೆ ನ್ಯಾಯಾಲಯದಲ್ಲಿ ವೀರ್ ಸಾವರ್ಕರ್ ಅವರ ಮೊಮ್ಮಗ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.