close

News WrapGet Handpicked Stories from our editors directly to your mailbox

ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರಲಿದೆ- ಗುಲಾಂ ನಬಿ ಅಜಾದ್

ಲೋಕಸಭೆ ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ಅಥವಾ ಎನ್ಡಿಎ ಸರಕಾರ ರಚಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅಭಿಪ್ರಾಯಪಟ್ಟಿದ್ದಾರೆ.

Updated: May 16, 2019 , 12:59 PM IST
ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರಲಿದೆ- ಗುಲಾಂ ನಬಿ ಅಜಾದ್
file photo

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ಅಥವಾ ಎನ್ಡಿಎ ಸರಕಾರ ರಚಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅಭಿಪ್ರಾಯಪಟ್ಟಿದ್ದಾರೆ.

"ನಾವು ಚುನಾವಣೆಯ ಕೊನೆಯ ಹಂತದಲ್ಲಿದ್ದೇವೆ ಮತ್ತು ದೇಶಾದ್ಯಂತ ಪ್ರಚಾರದ ಸಮಯದಲ್ಲಿ ನನಗೆ ಬಂದ ಅನುಭವವೆನೆಂದರೆ ಬಿಜೆಪಿ ಅಥವಾ ಎನ್ಡಿಎಯಾಗಲಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಬಹುದು.ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗುತ್ತಿಲ್ಲ, ಚುನಾವಣೆಯ ನಂತರ ಕೇಂದ್ರದಲ್ಲಿ ಎನ್ಡಿಎ ಅಥವಾ ಬಿಜೆಪಿಯೇತರ ಸರ್ಕಾರವನ್ನು ರಚಿಸಲಾಗುವುದು ಎಂದು ಗುಲಾಂ ನಬಿ ಅಜಾದ್  ಹೇಳಿದರು.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ನಾಯಕರ ಹೆಸರಿನ ಮೇಲೆ ಒಮ್ಮತವಿದ್ದರೆ ಉತ್ತಮ ಎಂದು ಆಜಾದ್ ಹೇಳಿದರು.ಅಲ್ಲದೆ ಪ್ರಧಾನಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಸಮಸ್ಯೆ ಸೃಷ್ಟಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಪ್ರಮುಖ ಉದ್ದೇಶ ಎನ್ಡಿಎ ಅಧಿಕಾರಕ್ಕೆ ಬರುವುದನ್ನು ತಡೆಯುವುದು ಎಂದರು. ಈ ಬಾರಿ ಬಿಜೆಪಿ 125 ಸ್ಥಾನಗಳಿಗೆ ಇಳಿಯಲಿದೆ ಎಂದು ತಿಳಿಸಿದರು. ಇದೇ ವೇಳೆ ಕಾಂಗ್ರೆಸ್ ಸೀಟುಗಳ ಕುರಿತಾಗಿ ಪ್ರಶ್ನಿಸಿದಾಗ ಹೇಳಲು ನಿರಾಕರಿಸಿದರು ಎನ್ನಲಾಗಿದೆ.

2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಸಮಾಜದಲ್ಲಿ ದ್ವೇಷ ಮತ್ತು ವಿಭಜನೆ ಸಿದ್ಧಾಂತವನ್ನು ಅನುಸರಿಸುತ್ತಿದೆ. ಅಲ್ಲದೇ ಬಂಡವಾಳಶಾಹಿ ಮತ್ತು ಕೈಗಾರಿಕೋದ್ಯಮಿ ನೀತಿಗಳನ್ನು ಅನುಸರಿಸುತ್ತಿದೆ ಎಂದರು.