ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತೆಲಂಗಾಣ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಕ
ಶುಕ್ರವಾರದಂದು ಮಾಜಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಅಝರುದ್ದೀನ್ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ.
ನವದೆಹಲಿ: ಶುಕ್ರವಾರದಂದು ಮಾಜಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಅಝರುದ್ದೀನ್ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತೆಲಂಗಾಣ ಪ್ರದೇಶ ಕಾಂಗ್ರೆಸ್ ನಲ್ಲಿ ಬಿಎನ್ ವಿನೋದ್ ಕುಮಾರ್ ಮತ್ತು ಜಾಫರ್ ಜಾವೇದ್ ಪಕ್ಷದ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಲ್ಲದೆ ಎಂಟು ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಘಟಕದಲ್ಲಿ ನಾಲ್ಕು ಕಾರ್ಯದರ್ಶಿಗಳನ್ನು ಅವರು ನೂತನವಾಗಿ ಆಯ್ಕೆ ಮಾಡಿದ್ದಾರೆ.ತೆಲಂಗಾಣದಲ್ಲಿ ಈಗ ವಿಧಾನಸಭೆ ಚುನಾವಣೆ ಇರುವುದರಿಂದ ಪಕ್ಷದ ಸಂಘಟನೆಗೆ ಈಗ ಮೇಜರ್ ಸರ್ಜರಿ ಮಾಡುವ ಮೂಲಕ ಪಕ್ಷಕ್ಕೆ ಹೊಸ ರೂಪ ನೀಡಿದ್ದಾರೆ.
ಈಗ ಈ ಕುರಿತಾಗಿ ಹೇಳಿಕೆ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ "ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕ ಮಾಡಿಕೊಂಡಿದ್ದಾರೆ." ಎಂದು ತಿಳಿಸಿದ್ದಾರೆ.
ಅಜರುದ್ದೀನ್ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕರಾಗಿದ್ದರು. 2000 ದಲ್ಲಿ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಅವರ ಹೆಸರು ಕೇಳಿಬಂದ ಕಾರಣ ನಂತರ ಅವರ ಕ್ರಿಕೆಟ್ ಜೀವನ ಹಠಾತ್ತನೆ ಅಂತ್ಯಗೊಂಡಿತು ಮತ್ತು ಬಿಸಿಸಿಐನಿಂದ ಅವರಿಗೆ ನಿಷೇಧ ಹೇರಲಾಯಿತು . ಮುಂದೆ 2012 ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಅವರ ಮೇಲೆ ವಿಧಿಸಿರುವ ನಿಷೇಧವು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿತು.
2009 ರಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಅಝರುದ್ದೀನ್ ಅವರು ಸಂಸತ್ ಸದಸ್ಯರಾಗಿದ್ದರು. ನಂತರ ಅವರು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರ್ ಕ್ಷೇತ್ರದಿಂದ 2014 ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನ್ನು ಅನುಭವಿಸಿದರು.ಈಗ ಮುಂಬರುವ 2019 ರ ಚುನಾವಣೆಯಲ್ಲಿ ಅವರು ತೆಲಂಗಾಣದ ಸಿಕಂದರಾಬಾದ್ ಕ್ಷೇತ್ರದಿಂದ 2019 ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.