ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸೋಮವಾರ ಬಂಧಿಸಲಾದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 9ರವರೆಗೆ ಜಾರಿ ನಿರ್ದೇಶನಾಲಯವು ಕಸ್ಟಡಿಗೆ ಪಡೆದುಕೊಂಡಿದೆ. ಇದೀಗ ಜೂನ್ 9ರಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.


COMMERCIAL BREAK
SCROLL TO CONTINUE READING

ನ್ಯಾಯಾಲಯದಲ್ಲಿ ಏನಾಯಿತು?


ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಜಾಡು ಪತ್ತೆ ಮಾಡಬೇಕಾಗಿದೆ. ಹೆಚ್ಚಿನ ತನಿಖೆಯ ಅಗತ್ಯವಿರುವ ಹಿನ್ನೆಲೆ 14 ದಿನಗಳ ಕಸ್ಟಡಿಗೆ ಕೋರಿ ಇಡಿ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.‘ಈ ಪ್ರಕರಣದಲ್ಲಿ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಸಿಕ್ಕಿದೆ. ಈ ಹಣವು ಸತ್ಯೇಂದ್ರ ಜೈನ್ ಅವರಿಗೆ ಸೇರಿದ್ದೇ ಅಥವಾ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆಯೇ ಎಂಬುದು ನಮಗೆ ತಿಳಿದಿಲ್ಲ. ಇದರಲ್ಲಿ ಬೇರೆ ಹಣದ ಮೂಲಗಳಿವೆಯೇ ಎಂಬುದನ್ನು ನಾವು ನೋಡಬೇಕಾಗಿದೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು. ಆರೋಪಿಗಳ ಸಂಬಂಧಿಕರಾದ ಅಂಕುಶ್ ಮತ್ತು ವೈಭವ್ ಜೈನ್ ಎಂಬುವರು ಅಫಿಡವಿಟ್ ಮೇಲೆ ಹೇಳಿಕೆ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.


ಇದನ್ನೂ ಓದಿ: Earn Money : ನಿಮ್ಮ ಬಳಿ ಈ 5 ರೂ. ನೋಟು ಇದ್ರೆ, ನೀವು ಗಳಿಸಬಹುದು ₹2 ಲಕ್ಷ..!


ಸತ್ಯೇಂದ್ರ ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್.ಹರಿಹರನ್, ‘ಈ ಪ್ರಕರಣ ಸಂಬಂಧ ಯಾವುದೇ ಬಲವಾದ ಸಾಕ್ಷ್ಯಾಧಾರಗಳಿಲ್ಲ. ಈಗಾಗಲೇ 2 ಬಾರಿ ಅವರ ಮನೆಯನ್ನು ಶೋಧಿಸಲಾಗಿದೆ. ಅವರ ಬ್ಯಾಂಕ್ ಖಾತೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದು ಹೇಳಿದರು. ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯವು ಅಂತಿಮವಾಗಿ ಸತ್ಯೇಂದ್ರ ಜೈನ್ ಅವರನ್ನು ಜೂನ್ 9ರವರೆಗೆ ಕೇಂದ್ರ ಸಂಸ್ಥೆ ಕಸ್ಟಡಿಗೆ ನೀಡಿದೆ.


ಏನಿದು ಪ್ರಕರಣ..?


ಭಾರತೀಯ ದಂಡ ಸಂಹಿತೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ತನಿಖೆಯನ್ನು ಪ್ರಾರಂಭಿಸಿದೆ.


ಇದನ್ನೂ ಓದಿ: 2024 ರಲ್ಲಿ ಬಿಜೆಪಿಗೆ ನೋ ಎಂಟ್ರಿ ಎಂದ ದೀದಿ


2015-2016ರಲ್ಲಿ ಜೈನ್ ಸಾರ್ವಜನಿಕ ಸೇವಕರಾಗಿದ್ದಾಗ ಅವರ ಒಡೆತನದ ಮತ್ತು ನಿಯಂತ್ರಣದಲ್ಲಿರುವ ಕಂಪನಿಗಳು ಹವಾಲಾ ಜಾಲದ ಮೂಲಕ ಶೆಲ್ ಕಂಪನಿಗಳಿಂದ 4.81 ಕೋಟಿ ರೂ.ವರೆಗೆ ಪಡೆದಿದ್ದವು ಎಂದು ಹಣಕಾಸು ತನಿಖಾ ಸಂಸ್ಥೆಯ ತನಿಖೆಗಳು ಬಹಿರಂಗಪಡಿಸಿವೆ ಎಂದು ಇಡಿ ತಿಳಿಸಿದೆ.


ಕೋಲ್ಕತ್ತಾ ಮೂಲದ ಆಪರೇಟರ್‌ಗಳಿಗೆ ವರ್ಗಾವಣೆಯಾದ ನಗದು ವಿರುದ್ಧ ಜೈನ್ ಅವರಿಗೆ ಸಂಬಂಧಿಸಿದ ಕಂಪನಿಗಳಿಗೆ ಹಣ ಜಮಾ ಮಾಡಲಾಗಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಕೃಷಿ ಭೂಮಿಯನ್ನು ಖರೀದಿಸಲು, ಸಾಲವನ್ನು ಮರುಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಇದೇ ವರ್ಷದ ಏಪ್ರಿಲ್‌ನಲ್ಲಿ ಅಕ್ರಮ ಆಸ್ತಿ ಪ್ರಕರಣದಲ್ಲಿ 4.81 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.