Monsoon Alert: ಶ್ರೀ ರಾಮನವಮಿಯ ಈ ದಿನ ಭಾರತೀಯರಿಗೆ ಶುಭ ಸುದ್ದಿಯೊಂದಿದೆ. ಈ ವರ್ಷ ಕೆಲವು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷಿಸಲಾಗಿದೆ. ಈ ಬಾರಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮುಂಗಾರು ಉತ್ತಮವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 


COMMERCIAL BREAK
SCROLL TO CONTINUE READING

ಭಾರತೀಯ ಹವಾಮಾನ ಇಲಾಖೆ (Indian Meteorological Department) ಬಿಡುಗಡೆ ಮಾಡಿರುವ ನೈಋತ್ಯ ಮಾನ್ಸೂನ್  ಸಮಗ್ರ ಮಳೆಯ ಮುನ್ಸೂಚನೆಯ ಪ್ರಕಾರ, ಜೂನ್ ನಿಂದ ಸೆಪ್ಟೆಂಬರ್ 2024 ರವರೆಗಿನ ನೈಋತ್ಯ ಮಾನ್ಸೂನ್ ಋತುವಿನಲ್ಲಿ ಇಡೀ ದೇಶವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಉಲ್ಲೇಖಿಸಲಾಗಿದೆ. 


2024 ರ ನೈಋತ್ಯ ಮಾನ್ಸೂನ್ ಋತುವಿನ (Southwest Monsoon Season) ಮಳೆಯ ಬಗ್ಗೆ ಮಾಹಿತಿ ನೀಡಿದ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಡಾ. ಎಂ. ರವಿಚಂದ್ರನ್,1971-2020 ಅಂಕಿಅಂಶಗಳ ಆಧಾರದ ಮೇಲೆ ಇಡೀ ದೇಶದಾದ್ಯಂತ ಮಾನ್ಸೂನ್ ಋತುವಿನ ದೀರ್ಘಾವಧಿಯ ಸರಾಸರಿ (LPA) ಮಳೆಯು 87 ಸೆಂ.ಮೀ.  ಈ ವರ್ಷ, ವಾಯವ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ- ಮೋದಿ ಅಲೆ ಇದೆ ಎಂಬ ಭ್ರಮೆಗೆ ಒಳಗಾಗಬಾರದು ಎಂದ ಬಿಜೆಪಿ ಅಭ್ಯರ್ಥಿ..!


ಯಾವ ರಾಜ್ಯದಲ್ಲಿ ಮುಂಗಾರು ಹೇಗಿರುತ್ತೆ? 
ಕೇರಳ, ತಮಿಳುನಾಡು, ಕರ್ನಾಟಕ (Karnataka Rain Update), ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ವರ್ಷ  ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. 


ಇದೇ ವೇಳೆ ಛತ್ತೀಸ್‌ಗಢ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ನಲ್ಲಿ ಸಾಮಾನ್ಯ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 


ಇದನ್ನೂ ಓದಿ- Daily GK Quiz: ಭೂಮಿಯ ಮೇಲಿನ ಅತಿ ದೊಡ್ಡ ಪ್ರಾಣಿ ಯಾವುದು?


ಈ ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಲಿದೆ ಮಳೆ: 
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಈ ವರ್ಷ ಒಡಿಶಾ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.