ಭೀಕರ ಅಪಘಾತ: ಪ್ರಪಾತಕ್ಕೆ ಬಸ್ ಉರುಳಿ 40ಕ್ಕೂ ಹೆಚ್ಚು ಪ್ರಯಾಣಿಕರ ಸಾವು
ಬೆಳಿಗ್ಗೆ 11.30 ರಿಂದ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು 70 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎನ್ನಲಾಗಿದೆ.
ಹೈದರಾಬಾದ್: ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆಯ ಬಸೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 46 ಪ್ರಯಾಣಿಕರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಧಾರುಣ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ತೆಲಂಗಾಣದ ಕೊಂಡಾಗಟ್ಟುವಿನಿಂದ ಜಗತೀಯಾಲ್ ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೆಳಿಗ್ಗೆ 11.30 ರಿಂದ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು 70 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎನ್ನಲಾಗಿದೆ.
ಘಟನೆ ಬಗ್ಗೆ ತಿಳಿದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಕರೀಂ ನಗರ ಜಿಲ್ಲಾ ಉಸ್ತುವಾರಿ ಸಚಿವ ಎಟಾಲಾ ರಾಜೇಂದರ್ ಅವರಿಗೆ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.