ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾ ಕ್ರಿಕೆಟ್‌ ಸ್ಟೇಡಿಯಂ ಅನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಉದ್ಘಾಟಿಸಿದ್ದು, ಈ ಮೈದಾನಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಗುಜಾರಾತ್ ರಾಜಧಾನಿ ಅಹಮದಾಬಾದ್‌ನಲ್ಲಿ ನಿರ್ಮಾಣವಾಗಿರುವ ವಿಶ್ವದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ಇಂದು(ಫೆ.24) ಲೋಕಾರ್ಪಣೆಗೊಂಡಿದ್ದು, ಈ ಸಂದರ್ಭದಲ್ಲಿ ಗೃಹಸಚಿವ ಅಮಿತ್ ಶಾ(Amit Shah), ಬಿಸಿಸಿಐ ಕಾರ್ಯದರ್ಶಿ ಜಯ ಶಾ, ಕ್ರೀಡಾಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೀಗ ನರೇಂದ್ರ ಮೋದಿ ಸ್ಟೇಡಿಯಂ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಹಗಲು-ರಾತ್ರಿ ಟೆಸ್ಟ್‌ ಪಂದ್ಯಕ್ಕೆ ಆತಿಥ್ಯ ವಹಿಸುವ ಮೂಲಕ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗಲಿದೆ.


ಶಾಲೆಯಲ್ಲಿ ಒಂದೇ ದಿನದಲ್ಲಿ 14 ಮಕ್ಕಳಿಗೆ Corona Positive


ಮೊಟೇರಾದಲ್ಲಿರುವ ಸರ್ದಾರ್ ವಲ್ಲಭ್‌ಬಾಯಿ ಪಟೇಲ್‌ ಸ್ಪೋರ್ಟ್ಸ್‌ ಎನ್‌ಕ್ಲೇವ್ ಮತ್ತು ನರೇಂದ್ರ ಮೋದಿ ಸ್ಟೇಡಿಯಂ(Narendra Modi Stadium) ಹಾಗೂ ನಾರಣ್‌ಪುರದಲ್ಲಿ ನಿರ್ಮಾಣವಾಗಲಿರುವ ಕ್ರೀಡಾ ಸಂಕೀರ್ಣ ಈ ಮೂರು ಕ್ರೀಡಾಸಂಕೀರ್ಣಗಳು ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಸರ್ವಸನ್ನದ್ಧವಾಗಿರಲಿದೆ. ಅಹಮದಾಬಾದ್‌ ಇನ್ಮುಂದೆ ಭಾರತದ ಕ್ರೀಡಾ ನಗರವಾಗಿ ಗುರುತಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರ್ಷ ವ್ಯಕ್ತಪಡಿಸಿದ್ದಾರೆ.


Maharashtra: ಮತ್ತೆ ಕರೋನಾ ಆತಂಕ, ಪೊಲೀಸ್ ಸಿಬ್ಬಂದಿಗೂ Work from Home


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.