ಚಪಾತಿ ತಿಂದ ಕೆಲವೇ ಹೊತ್ತಿನಲ್ಲಿ ತಾಯಿ-ಮಗ ದುರಂತ ಸಾವು! ಕಾರಣವೇನು ಗೊತ್ತಾ?

Food Poisoning: ತಾಯಿ ಮತ್ತು ಮಗನ ಸಾವಿನಿಂದ ಕುಟುಂಬದಲ್ಲಿ ದುಃಖದ ಛಾಯೆ ಮೂಡಿದೆ. ತಾಯಿ ಮತ್ತು ಮಗನ ಸಾವಿಗೆ ವಿಷಾಹಾರವೇ ಕಾರಣವಾಗಿರಬಹುದು ಅನ್ನೋ ಅನುಮಾನವಿದೆ. ​

Written by - Puttaraj K Alur | Last Updated : Apr 8, 2025, 05:11 PM IST
  • ಚಪಾತಿ ತಿಂದ ಕೆಲವೇ ಹೊತ್ತಿನಲ್ಲೇ ತಾಯಿ ಮತ್ತು ಮಗನ ದುರಂತ ಸಾವು
  • ತೆಲಂಗಾಣ ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ರುದ್ರಂಗಿ ಮಂಡಲದಲ್ಲಿ ಘಟನೆ
  • ತಾಯಿ ಮತ್ತು ಮಗನ ಸಾವಿಗೆ ಗಂಡನ ಮನೆಯವರೇ ಕಾರಣವೆಂದು ಆರೋಪ
ಚಪಾತಿ ತಿಂದ ಕೆಲವೇ ಹೊತ್ತಿನಲ್ಲಿ ತಾಯಿ-ಮಗ ದುರಂತ ಸಾವು! ಕಾರಣವೇನು ಗೊತ್ತಾ?

Shocking News: ಚಪಾತಿ ತಿಂದ ಕೆಲವೇ ಹೊತ್ತಿನಲ್ಲೇ ತಾಯಿ ಮತ್ತು ಮಗ ಇಬ್ಬರು ದುರಂತ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ತೆಲಂಗಾಣ ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ರುದ್ರಂಗಿ ಮಂಡಲದಲ್ಲಿ ಭಾನುವಾರ (ಏಪ್ರಿಲ್ 06) ನಡೆದಿದೆ. ಚಪಾಯಿ ತಿಂದು ಅಸ್ವಸ್ಥರಾಗಿದ್ದ ತಾಯಿ ಪುಷ್ಪಲತಾ (35) ಮತ್ತು ಮಗ ನಿಹಾನ್ (6) ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. 

Add Zee News as a Preferred Source

ಶುಕ್ರವಾರ (ಏಪ್ರಿಲ್ 04) ರಾತ್ರಿ ಚಪಾತಿ ತಿಂದ ಕೆಲವೇ ಹೊತ್ತಲ್ಲಿ ಅಮ್ಮ-ಮಗ ಇಬ್ಬರು ಅಸ್ವಸ್ಥರಾಗಿದ್ದರು. ಮಧ್ಯರಾತ್ರಿಯಲ್ಲಿ ಇಬ್ಬರೂ ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿದ್ದರು. ಕೂಡಲೇ ಕುಟುಂಬಸ್ಥರು ಅವರನ್ನು ಕೊರುಟ್ನಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ನಂತರ ಉತ್ತಮ ಚಿಕಿತ್ಸೆಗಾಗಿ ಕರೀಂನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್:‌ ಏಪ್ರಿಲ್ 12, 13 ಮತ್ತು 14 ರಂದು ಶಾಲೆಗಳಿಗೆ ರಜೆ

ವೈದ್ಯರು ತಕ್ಷಣವೇ ಚಿಕಿತ್ಸೆಯನ್ನು ಆರಂಭಿಸಿದ್ದರು. ಆದರೆ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದಾಗಲೇ ತಾಯಿ ಪುಷ್ಪಲತಾ ಪ್ರಾಣ ಕಳೆದುಕೊಂಡಿದ್ದಾರೆ. ಭಾನುವಾರ ರಾತ್ರಿ ಪುಷ್ಪಲತಾ ಸಾವಿಗೀಡಾದರೆ, ಮದುದಿನ ಅಂದರೆ ಸೋಮವಾರ ನಿಹಾನ್ ಕೂಡ ಕೊನೆಯುಸಿರೆಳೆದಿದ್ದಾನೆ.

ತಾಯಿ ಮತ್ತು ಮಗನ ಸಾವಿನಿಂದ ಕುಟುಂಬದಲ್ಲಿ ದುಃಖದ ಛಾಯೆ ಮೂಡಿದೆ. ತಾಯಿ ಮತ್ತು ಮಗನ ಸಾವಿಗೆ ವಿಷಾಹಾರವೇ ಕಾರಣವಾಗಿರಬಹುದು ಅನ್ನೋ ಅನುಮಾನವಿದೆ. ಹೀಗಾಗಿ ಪುಷ್ಪಲತಾಳ ಪಾಲಕರು ಆಕೆಯ ಗಂಡನ ಮನೆಯವರ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ತಾಯಿ ಮತ್ತು ಮಗನ ಸಾವಿಗೆ ಗಂಡನ ಮನೆಯವರೇ ಕಾರಣವೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 50 ರೂ. ಎಲ್‌ಪಿಜಿ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ಪುಷ್ಪಲತಾಗೆ ಆಕೆಯ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News