ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಮೋತಿಲಾಲ್ ವೋರಾ ನೇಮಕ ಸಾಧ್ಯತೆ!

ರಾಹುಲ್ ಗಾಂಧಿ ಮತ್ತು ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಮೋತಿಲಾಲ್ ವೋರಾ ಅವರು, ಕೇಂದ್ರ ಸಚಿವರಾಗುವುದಕ್ಕೂ ಮುನ್ನ 1985-1988ರವರೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. 

Last Updated : Jul 3, 2019, 06:30 PM IST
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಮೋತಿಲಾಲ್ ವೋರಾ ನೇಮಕ ಸಾಧ್ಯತೆ! title=
Pic Courtesy: ANI

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲದ ಒಡನಾಟ ಹೊಂದಿರುವ ಮೋತಿಲಾಲ್ ವೋರಾ ಅವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 

ಆದರೆ ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ವೋರ, "ಅಂತಹ ಯಾವುದೇ ಪ್ರಸ್ತಾಪದ ಬಗ್ಗೆ ನನಗೆ ಮಾಹಿತಿ ಇಲ್ಲ" ಎಂದಿದ್ದಾರೆ. 

ರಾಹುಲ್ ಗಾಂಧಿ ಮತ್ತು ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಮೋತಿಲಾಲ್ ವೋರಾ ಅವರು, ಕೇಂದ್ರ ಸಚಿವರಾಗುವುದಕ್ಕೂ ಮುನ್ನ 1985-1988ರವರೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, 1993 ರಿಂದ 1996ರ ಅವಧಿಯಲ್ಲಿ ಉತ್ತರಪ್ರದೇಶದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬಳಿಕ, ಪಕ್ಷದ ನೂತನ ಅಧ್ಯಕ್ಷರು ಯಾರಾಗಬಹುದು ಎಂಬ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. 

Trending News