ನವದೆಹಲಿ: ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ನಸುಕಿನಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದರು, ಅವರೆಲ್ಲರೂ ಪಂಜಾಬ್ ಮತ್ತು ಚಂಡೀಗಢದ ನಿವಾಸಿಗಳಾಗಿದ್ದು, ಮಥುರಾ-ವೃಂದಾವನದಿಂದ ಹಿಂತಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Haryana: Eight people were killed and over 20 injured after the bus they were travelling in caught fire on the Kundli-Manesar-Palwal (KMP) Expressway in Nuh. The bus was returning from Vrindavan. pic.twitter.com/16IuWriUgo
— ANI (@ANI) May 18, 2024
ಇದನ್ನೂ ಓದಿ- ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ
ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಬಸ್ಸನ್ನು ಹಿಂಬಾಲಿಸಿ ಚಾಲಕನಿಗೆ ನಿಲ್ಲಿಸುವಂತೆ ಹೇಳಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ.ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕ ಮೀನಾ ರಾಣಿ ಅವರು ಎಎನ್‌ಐ ಜೊತೆ ಮಾತನಾಡುತ್ತಾ, "ನಾವು ವೃಂದಾವನದಿಂದ ಹಿಂತಿರುಗುತ್ತಿದ್ದೆವು. ಬೆಂಕಿ ಹೇಗೆ ಸಂಭವಿಸಿತು ಎಂದು ನಮಗೆ ತಿಳಿದಿಲ್ಲ. 10 ಜನರು ಸಾವನ್ನಪ್ಪಿದ್ದಾರೆ. 64 ಜನರು ಬಸ್‌ನಲ್ಲಿ ಇದ್ದರು" ಎಂದು ಹೇಳಿದ್ದಾರೆ.
ಈ ಘಟನೆಯ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ ನುಹ್ ಶಾಸಕ ಅಫ್ತಾಬ್ ಅಹ್ಮದ್, "ಇದು ತುಂಬಾ ನೋವಿನ, ದುಃಖ ಮತ್ತು ಹೃದಯ ವಿದ್ರಾವಕ ಘಟನೆ" ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.