ಸಂಸದೆ ಶೋಭಾ ಕರಂದ್ಲಾಜೆ ಬ್ಯಾಂಕ್ ಖಾತೆ ಹ್ಯಾಕ್; 20 ಲಕ್ಷ ರೂ. ಕನ್ನ!
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್ ಬಿಐ ಖಾತೆಯನ್ನು ಹ್ಯಾಕ್ ಮಾಡಿದ ಖದೀಮರು ಬರೋಬ್ಬರಿ 20 ಲಕ್ಷ ರೂ.ಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನವದೆಹಲಿ: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್ ಬಿಐ ಖಾತೆಯನ್ನು ಹ್ಯಾಕ್ ಮಾಡಿದ ಖದೀಮರು ಬರೋಬ್ಬರಿ 20 ಲಕ್ಷ ರೂ.ಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದೇಶದ ಪ್ರತಿಯೊಬ್ಬ ಸಂಸದರಿಗೂ ಸಂಸತ್ ಭವನದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ತೆರೆದು, ಸಂಸದರ ವೇತನ, ಇತರ ಭತ್ಯೆಗಳನ್ನು ಇದೇ ಖಾತೆಗೆ ಜಮಾ ಮಾಡಲಾಗುತ್ತದೆ. ಆದರೀಗ ಈ ಖಾತೆಯಿಂದಲೇ ಖದೀಮರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಈ ಸಂಬಂಧ ಸಂಸದೆ ಶೋಭಾ ಕರಂದ್ಲಾಜೆ ಅವರು ಸಂಸತ್ ಭವನ ಮಾರ್ಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.