Anant Ambani Engagement : ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಇಂದು ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ದಂಪತಿಗಳು ಸಾಂಪ್ರದಾಯಿಕವಾಗಿ ಗುರು ಹಿರಿಯರ ನಡುವೆ ಪರಸ್ಪರ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ಕುರಿತು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.


COMMERCIAL BREAK
SCROLL TO CONTINUE READING

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಎಂಗೆಜ್ಮೆಂಟ್‌ ಮಾಡಿಕೊಂಡಿದ್ದಾರೆ. ಈ ಕುರಿತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ದೇಶಕ ಪರಿಮಳ್ ನಾಥ್ವಾನಿ ಫೋಟೋ ಹಂಚಿಕೊಂಡು ದಂಪತಿಗಳಿಗೆ ಶುಭಕೋರಿದ್ದಾರೆ. ಅನಂತ್‌ ಅಂಬಾನಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ. ಕೆಲವು ದಿನಗಳ ಹಿಂದೆ ಇಶಾ ಅಂಬಾನಿಗೆ ಅವಳಿ ಮಕ್ಕಳಾಗಿದ್ದವು. ಇದರ ನಡುವೆ ಅಂಬಾನಿ ಕುಟುಂಬ ಮತ್ತೊಂದು ಸಂತಸದ ಕ್ಷಣಕ್ಕೆ ಸಾಕ್ಷಿಯಾಗಿದೆ. ಅನಂತ್ ಅಂಬಾನಿ ರಾಧಿಕಾ ಮರ್ಚೆಂಟ್ ಜೊತೆ ಅದ್ದೂರಿಯಾಗಿ ಜರುಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ.


ಇದನ್ನೂ ಓದಿ: ಬರ್ತ್‌ಡೇ ಪಾರ್ಟಿಗೆ ಕಂಗನಾ ಕರೆಯಲು ಮರೆತ ಸಲ್ಲು..! ಓ.. ಮ್ಯಾಟರ್‌ ಇದಾ


ಅನಂತ್ ಮತ್ತು ರಾಧಿಕಾ ಕಳೆದ ಕೆಲವು ವರ್ಷಗಳಿಂದ ಒಟ್ಟಿಗೆ ಇದ್ದಾರೆ. ರಾಧಿಕಾ ಅಂಬಾನಿ ಕುಟುಂಬದ ಪ್ರತಿಯೊಂದು ದೊಡ್ಡ ಮತ್ತು ಸಣ್ಣ ಕಾರ್ಯಕ್ರಮದ ಭಾಗವಾಗಿದ್ದಾರೆ. ಅವರ ಸಂಬಂಧದ ಬಗ್ಗೆ ಬಹಳ ದಿನಗಳಿಂದ ಚರ್ಚೆಗಳು ನಡೆಯುತ್ತಿದ್ದವು. ಈ ಮೂಲಕ ಈಗ ಇಬ್ಬರೂ ಶುಗರ್‌ ಲೇಪಿತರಾಗಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕ ಪರಿಮಳ್ ನಾಥ್ವಾನಿ ಅವರು ಅನಂತ್ ಮತ್ತು ರಾಧಿಕಾ ಅವರ ನಿಶ್ಚಿತಾರ್ಥದ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಫೋಟೋದಲ್ಲಿ ಅನಂತ್ ಮತ್ತು ರಾಧಿಕಾ ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ. ಅನಂತ್ ಪಿಂಕ್ ಕುರ್ತಾ ಧರಿಸಿದ್ದು, ರಾಧಿಕಾ ಪಿಂಕ್ ಲೆಹೆಂಗಾ ಮತ್ತು ಆಭರಣದಲ್ಲಿ ಅದ್ಬುತವಾಗಿ ಕಂಗೊಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.