Mulayam Singh Yadav Condition Critical: ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದಾಗಿ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯು-5 ಗೆ ಸ್ಥಳಾಂತರಿಸಲಾಗಿದೆ. ವೈದ್ಯರು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಲವು ದಿನಗಳಿಂದ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಐಸಿಯುಗೆ ಸ್ಥಳಾಂತರಿಸುವಾಗ ಸಹೋದರ ಶಿವಪಾಲ್ ಸಿಂಗ್ ಯಾದವ್ ಮತ್ತು ಮಗ ಪ್ರತೀಕ್ ಅವರೊಂದಿಗೆ ಇದ್ದರು. ಸಿಂಗ್ ಅವರ ಆರೋಗ್ಯ ಹದಗೆಟ್ಟಾಗ, ಡಾ.ನರೇಶ್ ಟ್ರೆಹಾನ್, ಡಾ.ಸುನೀತಾ, ಡಾ.ಮನೋಜ್ ಮತ್ತು ಡಾ.ಅಭಿಷೇಕ್ ಅವರ ತಪಾಸಣೆ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-Maharashtra CM: ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಜೀವ ಬೆದರಿಕೆ, ಹಲ್ಲೆಯ ಸಂಚು ಬಹಿರಂಗ


ಮತ್ತೊಂದೆಡೆ, ತಂದೆಯ ಸ್ಥಿತಿ ಚಿಂತಾಜನಕವಾಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನವದೆಹಲಿಗೆ ತೆರಳಿದ್ದಾರೆ. ಮುಲಾಯಂ ಸಿಂಗ್ ಯಾದವ್ ಸೊಸೆ ಡಿಂಪಲ್ ಯಾದವ್ ಕೂಡ ಮೇದಾಂತ ತಲುಪಿದ್ದಾರೆ. ಸಿಂಗ್ ಅವರ ಆರೋಗ್ಯ ಬಹಳ ದಿನಗಳಿಂದ ಹದಗೆಟ್ಟಿತ್ತು ಎನ್ನಲಾಗಿದೆ. ಮೂರು ತಿಂಗಳ ಹಿಂದೆಯೇ ಅವರ ಕುಟುಂಬ ಸದಸ್ಯರು ಅವರನ್ನು ಈ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಇಲ್ಲಿ ಸಂಪೂರ್ಣ ತಪಾಸಣೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಬೆಳಗಿನ ಜಾವದವರೆಗೂ ಎಲ್ಲವೂ ಸರಿಯಾಗಿತ್ತು, ಆದರೆ ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.


Watch: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೇಲೆ ಪ್ಲಾಸ್ಟಿಕ್ ಬಾಟಲಿ ಎಸೆತ..!

ಅವರ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡ ವೈದ್ಯರು ಕೂಡಲೇ ಅವರನ್ನು ಐಸಿಯು-5ಕ್ಕೆ ಸ್ಥಳಾಂತರಿಸಿದ್ದಾರೆ. ವೈದ್ಯರ ಪ್ರಕಾರ, ಸಿಂಗ್ ಅವರ ರಕ್ತದೊತ್ತಡ ಮತ್ತು ಆಮ್ಲಜನಕ ಈಗಾಗಲೇ ಕಡಿಮೆಯಾಗಿದೆ. ಮೇದಾಂತ ಆಸ್ಪತ್ರೆ ಆಡಳಿತ ಮಂಡಳಿಯು ಅವರ ಆರೋಗ್ಯ ಸ್ಥಿತಿಯ ಕುರಿತು ಸಂಜೆ 7:30ಕ್ಕೆ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಲಿದೆ. ಇದರಲ್ಲಿ ಅವರ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎನ್ನಲಾಗಿದೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.