ಮುಲಾಯಂ ಸಿಂಗ್ ಯಾದವ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರ ಸಂತಾಪ
ಸಮಾಜವಾದಿ ಪಕ್ಷದ ಮುಖ್ಯಸ್ಥ & ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ತಮ್ಮ 82ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. 3 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ‘ಮುಲಾಯಂ ಸಿಂಗ್ ಯಾದವ್ ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ಉತ್ತಮ ನಾಯಕರಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರ ಸೇವೆ ಸಲ್ಲಿಸಿದರು ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಮತ್ತು ಡಾ.ರಾಮಮನೋಹರ್ ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು’ ಎಂದು ಹೇಳಿದ್ದಾರೆ.
Big Breaking: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ
‘ಮುಲಾಯಂ ಸಿಂಗ್ ಯಾದವ್ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಅಯವರ ಸಾಧನೆ ಅಸಾಧಾರಣವಾದದು. ‘ಭೂಮಿ ಪುತ್ರ’ ಮುಲಾಯಂಜಿಯರು ಭೂಮಿಗೆ ಸಂಬಂಧಿಸಿದ ಹಿರಿಯ ನಾಯಕರಾಗಿದ್ದರು. ಎಲ್ಲ ಪಕ್ಷಗಳ ಜನರೂ ಅವರನ್ನು ಗೌರವಿಸುತ್ತಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
‘ನಾವು ಒಂದೇ ಮನೆಯ ಅಣ್ಣ-ತಮ್ಮಂದಿರು ಇದ್ದ ಹಾಗೆ’-ಖರ್ಗೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದು, ‘ನನ್ನ ಬಹುಕಾಲದ ಸಹೋದ್ಯೋಗಿ ಮತ್ತು ಸ್ನೇಹಿತ ಮುಲಾಯಂ ಸಿಂಗ್ ಯಾದವ್ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಅವರು ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯ ಸಂಪ್ರದಾಯಗಳಿಗೆ ಬದ್ಧರಾಗಿದ್ದರು. ಅವರನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ’ ಅಂತಾ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.