ಮುಂಬೈ: ನಗರದ ಚಾರ್ನಿ ರಸ್ತೆ ಪ್ರದೇಶದ ಡ್ರೀಮ್‌ಲ್ಯಾಂಡ್ ಸಿನೆಮಾ ಬಳಿಯ ವಸತಿ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿ, ಕಟ್ಟಡದಲ್ಲಿ ಸಿಕ್ಕಿಬಿದ್ದ ಎಲ್ಲ ಜನರನ್ನು ರಕ್ಷಿಸಲಾಗಿದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಕಟ್ಟಡದಲ್ಲಿ ಅಗ್ನಿ ಅವಘಡ ಸಂಭಸಿರುವ ಬಗ್ಗೆ ಮಾಹಿತಿ ತಿಳಿದೊಡನೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳವು ಕಟ್ಟಡದಲ್ಲಿ ಸಿಕ್ಕಿಬಿದ್ದ ಎಂಟು ಜನರನ್ನು ರಕ್ಷಿಸಿದೆ.



ಮಾಹಿತಿಯ ಪ್ರಕಾರ, ಮೊದಲಿಗೆ ಬೆಂಕಿ ಕಾಣಿಸಿಕೊಂಡ ವಸತಿ ಕಟ್ಟಡದಲ್ಲಿ 4-5 ಮಂದಿ ಸಿಲುಕಿದ್ದಾರೆ ಎನ್ನಲಾಗಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ರೇನ್ ಮತ್ತು ಏಣಿಗಳ ಸಹಾಯದಿಂದ ಕಟ್ಟಡದಲ್ಲಿ ಸಿಲುಕಿದ್ದ ಜನರನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ದರು. ಅದೇ ಸಮಯದಲ್ಲಿ, ಬೆಂಕಿಯನ್ನು ನಿಯಂತ್ರಿಸಲಾಗಿದೆ.