ಮುಂಬೈ: ಇಲ್ಲಿನ ಡೊಂಗ್ರಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ದುರಂತದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಫಡ್ನವೀಸ್, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನೂ ಮಹಾರಾಷ್ಟ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
CM @Dev_Fadnavis announces ₹5 lakh for the next of kins of deceased in #MumbaiBuildingCollapse incident in Dongri yesterday.
And ₹50,000 for the injured and all medical expenses of the injured will be borne by Government of Maharashtra.— CMO Maharashtra (@CMOMaharashtra) July 17, 2019
ಮಂಗಳವಾರ ಬೆಳಿಗ್ಗೆ 11.40 ರ ಸುಮಾರಿಗೆ ಕುಸಿದ ಕಟ್ಟಡದ ಅವಶೇಷಗಳಡಿ ಸಿಲುಕಿ ಇದುವರೆಗೂ 14 ಮಂದಿ ಮೃತಪಟ್ಟಿದ್ದು, ಸುಮಾರು 10 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಶತಮಾನದಷ್ಟು ಹಳೆಯದಾದ ಈ ಕಟ್ಟಡವನ್ನು 2017ರಲ್ಲಿಯೇ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಬಳಿಕ ಕಟ್ಟಡದ ಪುನರ್ ಅಭಿವೃದ್ಧಿಗಾಗಿ ಕಟ್ಟಡದಲ್ಲಿ ವಾಸವಿದ್ದ ಜನತೆ ಎಂಎಚ್‌ಎಡಿಎ ಅಧಿಕಾರಿಗಳನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ.
ಸದ್ಯ ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದು, ಶ್ವಾನದಳದ ಸಹಾಯವನ್ನೂ ಪಡೆದಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ.